6

ಸೋಹೆಲ್ ಗಾಗಿ ಜಲಪಾತದಲ್ಲಿ ಮುಂದುವರಿದ ಶೋಧ

ಯಲ್ಲಾಪುರ ತಾಲೂಕಿನ ಕಾನೂರು ಜಲಪಾತದಲ್ಲಿ ಬಿದ್ದು ಕಾಣೆಯಾದ ಯುವಕನಿಗಾಗಿ ಬುಧವಾರ ಬೆಳಗ್ಗೆ ಶೋಧ ಕಾರ್ಯ ಮುಂದುವರಿಸಲಾಗಿದೆ.

ಕಾಣೆಯಾದ ಧಾರವಾಡ ಮೂಲದ ಸೋಹೆಲ್ ಖಾನ್ ಗಾಗಿ ಪೊಲೀಸರು, ಅಗ್ನಿಶಾಮಕ ದಳದವರು, ಸ್ಥಳೀಯರು ಶೋಧ ನಡೆಸುತ್ತಿದ್ದಾರೆ.

 

ಹಳಿಯಾಳದ ದೇಶಪಾಂಡೆ ಇಂಜಿನಿಯರಿಂಗ್ ಕಾಲೇಜಿನ 4 ನೇ ಸೆಮಿಸ್ಟರ್ ವಿದ್ಯಾರ್ಥಿಯಾಗಿರುವ ಸೋಹೆಲ್, ತನ್ನ ಸಹಪಾಠಿಗಳಾದ ಅಮಾನ್, ಶ್ರೀವಾಸ್ತ, ತಂಜಿಲ್, ನೇಹಾ, ಮಹಿಮಾ, ಸುರಭಿ, ಸುಶ್ಮಿತಾ ಅವರೊಂದಿಗೆ ಪ್ರವಾಸಕ್ಕೆಂದು ಕಾನೂರಿಗೆ ಬಂದಿದ್ದರು.
ಜಲಪಾತ ವೀಕ್ಷಿಸಿ, ಮರಳಿ ಊರಿಗೆ ಹೊರಡಬೇಕೆಂಬ ತಯಾರಿ ನಡೆಸುವಾಗಲೇ ಸೋಹೆಲ್, ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಬಿದ್ದು ಕಾಣೆಯಾಗಿದ್ದಾರೆ.

ವಿಷಯ ತಿಳಿದ ತಕ್ಷಣ ಗ್ರಾಮ ಅರಣ್ಯ ಸಮಿತಿಯವರು, ಪೊಲೀಸರಿಗೆ ಹಾಗೂ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಧಿಕಾರಿಗಳು ಶೋಧ ಕಾರ್ಯ ಆರಂಭಿಸಿದ್ದು, ರಾತ್ರಿ ಸ್ಥಗಿತಗೊಳಿಸಲಾಗಿತ್ತು. ಬುಧವಾರ ಬೆಳಿಗ್ಗೆ ಮತ್ತೆ ಕಾರ್ಯಾಚರಣೆ ಆರಂಭಿಸಲಾಗಿದೆ.‌

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page