6

ಕಂಟೇನರ್ ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಸಾವು

ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿ, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಯಲ್ಲಾಪುರ ತಾಲೂಕಿನ ಕಿರವತ್ತಿಯ ಅಲ್ಕೇರಿ ಕ್ರಾಸ್ ಬಳಿ‌ ನಡೆದಿದೆ.

ಬೈಲಂದೂರಿನ ಛಾಯಪ್ಪ ಸೋಮಾಪುರಕರ್ (45) ಮೃತಪಟ್ಟ ವ್ಯಕ್ತಿ. ಡಿಕ್ಕಿಯ ರಭಸಕ್ಕೆ ಬಿದ್ದಿದ್ದ ಸವಾರನ ತಲೆಯ ಮೇಲೆ ಲಾರಿಯ ಚಕ್ರ ಹರಿದಿದ್ದು, ಸ್ಥಳದಲ್ಲೇ ಆತ ಮೃತಪಡಲು ಕಾರಣವಾಗಿದೆ.

ಇನ್ನೊಬ್ಬ ಸವಾರ ಪ್ರಭಾಕರ ಸೋಮಾಪುರಕರ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಯಲ್ಲಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page