6

ಉಪಳೇಶ್ವರದಲ್ಲಿ ಸಂಭ್ರಮದ ಶಾರದಾ ಉತ್ಸವ: ಯಕ್ಷಗಾನ ಪ್ರದರ್ಶನ ನಾಳೆ

ಯಲ್ಲಾಪುರ ತಾಲೂಕಿನ ಉಪಳೇಶ್ವರದಲ್ಲಿ ಶಾರದಾ ಉತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ನಡೆಯುತ್ತಿದೆ.

ಶಾರದಾ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜಿಸಲಾಗುತ್ತಿದ್ದು, ನೂರಾರು ಜನ ಆಗಮಿಸಿ ದರ್ಶನ ಪಡೆಯುತ್ತಿದ್ದಾರೆ.

ಉತ್ಸವದ ಪ್ರಯುಕ್ತ ಅಕ್ಟೋಬರ್ 1 ರಂದು ರಾತ್ರಿ 8.30 ಕ್ಕೆ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಕೃಷ್ಣಾರ್ಜುನ ಕಾಳಗ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಹಿಮ್ಮೇಳದಲ್ಲಿ ಭಾಗವತರಾಗಿ ಕೆ.ಡಿ.ಹೆಗಡೆ ಕನಕನಹಳ್ಳಿ, ಮದ್ದಲೆವಾದಕರಾಗಿ ಕೃಷ್ಣ ಹೆಗಡೆ ಜೋಗದಮನೆ, ಚಂಡೆವಾದಕರಾಗಿ ನಯನಕುಮಾರ ನಿಟ್ಟೂರು ಭಾಗವಹಿಸಲಿದ್ದಾರೆ.

ಸುಬ್ರಹ್ಮಣ್ಯ ಚಿಟ್ಟಾಣಿ, ಕಾರ್ತಿಕ ಚಿಟ್ಟಾಣಿ, ನಾಗರಾಜ ಭಟ್ಟ ಕುಂಕಿಪಾಲ, ಶ್ರೀಧರ ಅಣಲಗಾರ, ಗುರು ಭಟ್ಟ ಜಂಬೇಸಾಲ, ವೆಂಕಟರಮಣ ಭಟ್ಟ ಕವಡಿಕೆರೆ, ಅನೀಶ ಭಟ್ಟ ಹಶಿನಮನೆ ಪಾತ್ರ ನಿರ್ವಹಿಸಲಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page