ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಯಾವುದೇ ಜೀವಹಾನಿ ಆಗದಂತೆ ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನೇಕರ್ ಅಧೀನ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈಗಾಗಲೇ ಗುರುತಿಸಲಾಗಿರುವ ಗುಡ್ಡ ಕುಸಿತ ಮತ್ತು ಅಪಾಯಕಾರಿ ಪ್ರದೇಶದಲ್ಲಿ ವಾಸಿಸುತ್ತಿರುವವರಿಗೆ ಅಗತ್ಯ ಎಚ್ಚರಿಕೆ ನೀಡಿ, ಅವರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅವರು ತಿಳಿಸಿದ್ದಾರೆ. ಮನೆ ಕುಸಿತ, ಕೊಟ್ಟಿಗೆ ಹಾನಿ ಮತ್ತು ಜಾನುವಾರು ಸಾವು ಪ್ರಕರಣಗಳಿಗೆ ಶೀಘ್ರದಲ್ಲಿ ಪರಿಹಾರ ವಿತರಿಸುವಂತೆ ನಿರ್ದೇಶನ ನೀಡಿದ್ದಾರೆ. `ಜಿಲ್ಲೆಯಲ್ಲಿ ವಿಕೋಪ ಪರಿಹಾರ ಧನ ವಿತರಣೆಗೆ ಯಾವುದೇ ಅನುದಾನದ ಕೊರತೆಯಿಲ್ಲ, ಎಲ್ಲಾ ತಾಲೂಕುಗಳಲ್ಲಿ ಪ್ರಸ್ತುತ ಲಭ್ಯವಿರುವ ಅನುದಾನವನ್ನು ವೆಚ್ಚ ಮಾಡಿ, ಹೆಚ್ಚಿನ ಅನುದಾನದ ಅಗತ್ಯವಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಕೋರಿಕೆ ಸಲ್ಲಿಸಿ’ ಎಂದವರು ಹೇಳಿದ್ದಾರೆ.
Discussion about this post