6

ಅಕ್ಟೋಬರ್ 12 ರಂದು ಓಪನ್ ರಾಪಿಡ್ ಚೆಸ್ ಟೂರ್ನಮೆಂಟ್

ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ತಾಲೂಕು ಸಮಿತಿಯ ಆಶ್ರಯದಲ್ಲಿ ತೃತೀಯ ವರ್ಷದ ಓಪನ್ ರಾಪಿಡ್ ಚೆಸ್ ಟೂರ್ನಮೆಂಟ್‌ ಯಲ್ಲಾಪುರದ ಎಪಿಎಂಸಿ ರೈತಸಭಾಭವನದಲ್ಲಿ ಅ.12 ರಂದು ಬೆಳಗ್ಗೆ 10.30 ಕ್ಕೆ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ವೇಣುಗೋಪಾಲ ಮದ್ಗುಣಿ ಹೇಳಿದರು.

ಅವರು ರವಿವಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿ, ಈಗಾಗಲೇ 100 ಕ್ಕೂ ಹೆಚ್ಚು ಆಸಕ್ತರು ಸ್ಪರ್ಧೆಯಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಂಡಿದ್ದಾರೆ ಎಂದರು.

ಹೆಸ್ಕಾಂ ಅಧ್ಯಕ್ಷ ಸೈಯ್ಯದ್ ಅಜೀಮಪೀರ್ ಖಾದ್ರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಶಿವರಾಮ ಹೆಬ್ಬಾರ ಅಧ್ಯಕ್ಷತೆ ವಹಿಸಲಿದ್ದಾರೆ. ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ವೈಶಾಲಿ ಎಂ.ಎಲ್, ಹೆಸ್ಕಾಂ ತಾಂತ್ರಿಕ ನಿರ್ದೇಶಕ ಎಸ್ ಜಗದೀಶ್, ಡಿ ಎಫ್ ಒ ಹರ್ಷಭಾನು, ಜಿ ಪಂ ಮಾಜಿ ಸದಸ್ಯ ವಿಜಯ ಮಿರಾಶಿ ಭಾಗವಹಿಸಲಿದ್ದಾರೆ.
ಇದೇ ವೇಳೆ ವಿವಿಧ ಕ್ಷೇತ್ರದ ಸಾಧಕರಾದ ರಾಘವೇಂದ್ರ ಕೋಟೆಮನೆ, ಜಯರಾಮ ಸಿದ್ದಿ, ಮಹೇಶ ನಾಯ್ಕ,
ಎನ್ ಕೆ ಭಾಗ್ವತ್, ರಾಮು ನಾಯ್ಕ, ಮುರಳಿ ಹೆಗಡೆ, ಜಫ್ರುಲ್ಲಾ ಖಾನ್, ಎಂ ಜಗದೀಶ, ವೈ ಎಸ್ ಗೋಕುಲ್, ವೆಂಕಟೇಶ ನಾಯ್ಕ,ಮಂಜುನಾಥ ಅರೆಗುಳಿ ಅವರನ್ನು ಸನ್ಮಾನಿಸಲಾಗುವುದು ಎಂದು ವಿವರಿಸಿದರು.

ಸಂಜೆ 4ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಎಂ ಎಲ್ ಸಿ ಶಾಂತಾರಾಮ ಸಿದ್ದಿ ಬಹುಮಾನ ವಿತರಿಸಲಿದ್ದಾರೆ. ಸಂಕಲ್ಪ ಸಂಸ್ಥೆಯ ಅಧ್ಯಕ್ಷ ಪ್ರಮೋದ ಹೆಗಡೆ ಅಭಿನಂಧನಾ‌
ಮಾತನಾಡಲಿದ್ದಾರೆ. ವಿಶ್ವದರ್ಶನ ಶಿಕ್ಷಣ ಸಮೂಹದ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ, ಹೆಸ್ಕಾಂ ಎಇಇ ರಮಾಕಾಂತ ನಾಯ್ಕ, ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರ ಸಂಘದ ಜಿಲ್ಲಾಧ್ಯಕ್ಷ ಪ್ರದೀಪ ಗುನಗಿ, ರಾಜ್ಯ ಸಂಘದ ಸದಸ್ಯ ಸಿದ್ದಾರ್ಥ ನಾಯ್ಕ, ನಾಮನಿರ್ದೇಶಿತ ಸದಸ್ಯ ನಾಗರಾಜ ಕುನ್ನೂರು ಭಾಗವಹಿಸುತ್ತಾರೆ ಎಂದರು.

ಪಂದ್ಯಾವಳಿ 12 ವರ್ಷದ ಒಳಗಿನವರಿಗೆ ಹಾಗೂ 16 ವರ್ಷ ಮೇಲ್ಪಟ್ಟವರಿಗೆ ನಡೆಯಲಿದ್ದು, ವಿವಿಧ ವಿಭಾಗದ ವಿಜೇತರಿಗೆ ಒಟ್ಟು 53 ಟ್ರೋಫಿಗಳನ್ನು ವಿವರಿಸಲಾಗುತ್ತದೆ. 150 ಸ್ಪರ್ಧಿಗಳಿಗೆ ಅವಕಾಶ ಇದ್ದು, ವಿಜೇತರಿಗೆ ಆಕರ್ಷಕ ಬಹುಮಾನ ನೀಡಲಾಗುತ್ತದೆ ಎಂದರು. ಸಂಘದ ಉಪಾಧ್ಯಕ್ಷರಾದ ಸತೀಶ್ ಹೆಗಡೆ, ದಿನೇಶ ರೇವಣಕರ್ ಇದ್ದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page