6

ಬರ್ತಡೆ ಪಾರ್ಟಿ: ಆಕಸ್ಮಿಕವಾಗಿ ನೀರಿಗೆ ಬಿದ್ದ ಯುವಕ

ಯಲ್ಲಾಪುರ ತಾಲೂಕಿನ ಅರಬೈಲ್ ಸಮೀಪದ ಕೆಳಾಸೆ ಹೊಳೆಯಲ್ಲಿ ಮುಳುಗಿ ಯುವಕನೊಬ್ಬ ಕಾಣೆಯಾದ ಘಟನೆ ಮಂಗಳವಾರ ಸಂಜೆ ನಡೆದಿದೆ.

ಯಲ್ಲಾಪುರದ ಸಬಗೇರಿ ನಿವಾಸಿ ಸಾಗರ್ ರಾಮಾ ದೇವಾಡಿಗ (23) ಕಾಣೆಯಾದ ಯುವಕ. ಈತ ತನ್ನ ಸ್ನೇಹಿತರಾದ ದಿನೇಶ, ಪುನಿತ್, ವಿನೋದ ಎಂಬವರ ಜೊತೆ ಸೇರಿ ಬರ್ತಡೆ ಪಾರ್ಟಿ ಮಾಡಲು ಇಡಗುಂದಿ ಗ್ರಾಮ ಪಂಚಾಯತ ವ್ಯಾಪ್ತಿಯ, ಅರಬೈಲ್ ಸಮೀಪದ ಕೆಳಾಸೆ ಹೊಳೆಗೆ ಹೋಗಿದ್ದರು. ಸಂಜೆ ಸುಮಾರು 4.30 ರ ವೇಳೆಗೆ ಸಾಗರ್ ರಾಮಾ ದೇವಾಡಿಗ ಆಕಸ್ಮಿಕವಾಗಿ ಹೊಳೆಯಲ್ಲಿ ಬಿದ್ದು ಕಾಣೆಯಾಗಿರುವುದಾಗಿ ತಿಳಿದು ಬಂದಿದೆ.

ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಸಾಗರ್ ಗಾಗಿ ಶೋಧ ನಡೆಸುತ್ತಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page