6
September 29, 2026

ಹೆದ್ದಾರಿ ಪಕ್ಕ ಉರುಳಿ ಬಿದ್ದ ಲಾರಿ

ಸರಕು ತುಂಬಿದ ಲಾರಿಯೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ತಾಲೂಕಿನ ಆರತಿಬೈಲ್ ಬಳಿ ನಡೆದಿದೆ.

ಬ ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಸರಕು ತುಂಬಿಕೊಂಡು ಹೊರಟಿದ್ದ ಲಾರಿ ಆರತಿಬೈಲ್ ಸಮೀಪದ ಇಳಿಜಾರಿನಲ್ಲಿ ಸಾಗುವಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿ ಕಂದಕದಲ್ಲಿ ಉರುಳಿ ಬಿದ್ದಿದೆ.

ಘಟನೆಯಲ್ಲಿ ಲಾರಿ ಜಖಂಗೊಂಡಿದೆ. ಚಾಲಕ, ನಿರ್ವಾಹಕರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

You cannot copy content of this page