6

ಅಣಲಗಾರಿನಲ್ಲಿ ಶ್ರೀಮದ್ಭಾಗವತ ಸಪ್ತಾಹ ಯಜ್ಞ

ಯಲ್ಲಾಪುರ ತಾಲೂಕಿನ ಅಣಲಗಾರ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸ್ವರ್ಣವಲ್ಲೀ ಮಠ, ಕರಡೊಳ್ಳಿಯ ಗೋವರ್ಧನ ಗೋಶಾಲೆಗಳ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀಮದ್ಭಾಗವತ ಸಪ್ತಾಹ ಯಜ್ಞ ನಡೆಯುತ್ತಿದೆ.

ಸಪ್ತಾಹದ ಎರಡನೇ ದಿನ ಪ್ರವಚನ ನೀಡಿದ, ವಿದ್ವಾನ್ ವಾಸುದೇವ ಭಟ್ಟ ಹಂದಲಸು, ವೇದಗಳೇ ಮೂಲ ಬೇರಾಗಿರುವ ಸನಾತನ ಧರ್ಮವನ್ನು ನಾಶಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು. ಸರಸ್ವತಿ-ಬ್ರಹ್ಮರಿಗೆ ನೀಡಿದ ಮಾತಿನಂತೆ ವಿಷ್ಣುವೇ ಕೃಷ್ಣನಾಗಿ ಅವತರಿಸಿದ ಕಥಾಭಾಗವನ್ನು ಪ್ರಸ್ತುತಪಡಿಸಿದರು.

ಇದಕ್ಕೂ ಮುನ್ನ ವೈದಿಕರಿಂದ ಭಾಗವತದ ಮೂಲಗ್ರಂಥ ಪಾರಾಯಣ ನಡೆಯಿತು. ಲಕ್ಷ್ಮೀ ಹಾಗೂ ಗೋಪಾಲಕೃಷ್ಣ ಭಟ್ಟ ದಂಪತಿ ಪೂಜೆ ನೆರವೇರಿಸಿದರು. ನೂರಾರು ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page