6

ಯಲ್ಲಾಪುರದಲ್ಲಿ ಮುಂದುವರಿದ ಕಳ್ಳರ ಕೈಚಳಕ

ಯಲ್ಲಾಪುರ ತಾಲೂಕಿನಲ್ಲಿ ಇತ್ತೀಚೆಗೆ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು, ಕಳ್ಳರ ಕೈಚಳಕಕ್ಕೆ ಕಡಿವಾಣ ಹಾಕುವ ಪ್ರಯತ್ನಗಳು ಸಾಲುತ್ತಿಲ್ಲ ಎಂಬ ಮಾತು ಕೇಳಿ ಬರುತ್ತಿದೆ.

ಪಟ್ಟಣ ಭಾಗದಲ್ಲಿ ಕಳ್ಳರ ಕೈಚಳಕ ಮುಂದುವರಿದಿದ್ದು, ತಾಲೂಕಾ ಪಂಚಾಯತ ಸಮೀಪದ ಮತ್ತೆರಡು ಅಂಗಡಿಗಳಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದೆ.
ತಾಲೂಕಾ ಪಂಚಾಯತ ಸಮೀಪ ಇರುವ ಸೀತಾಲಕ್ಷ್ಮೀ ಮೆಡಿಕಲ್ಸ್, ಅದರ ಎದುರಿಗಿರುವ ಶಂಕರ್ ಸ್ವೀಟ್ಸ್ ಎಂಬ ಅಂಗಡಿಗಳಲ್ಲಿ ಕಳ್ಳತನ ನಡೆದಿದೆ.

ರಾತ್ರಿ ವೇಳೆ ಬೀಗ ಮುರಿದು ಒಳನುಗ್ಗಿರುವ ಕಳ್ಳರು ಮೆಡಿಕಲ್ಸ್ ನಲ್ಲಿ ಇದ್ದ 40 ಸಾವಿರ ರೂಗಿಂತ ಹೆಚ್ಚಿನ ಹಣ ಕದ್ದೊಯ್ದಿದ್ದಾರೆ. ಬೇಕರಿಯಿಂದಲೂ ಕೆಲ ಸಾಮಗ್ರಿಗಳನ್ನು ಹಾಗೂ ಹಣವನ್ನು ಕದ್ದಿದ್ದಾರೆ.

ಬೆಳಗಿನ ಜಾವ ಅಂಗಡಿಯ ಬಾಗಿಲು ತೆರೆದಿರುವುದನ್ನು ಗಮನಿಸಿದ ಸ್ಥಳೀಯರು, ಅಂಗಡಿ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ಮಾಲೀಕರು ಸ್ಥಳಕ್ಕೆ ಬಂದು ನೋಡಿದಾಗ ಕಳ್ಳತನ ನಡೆದಿರುವುದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಪಟ್ಟಣದಲ್ಲಿ ಅಂಗಡಿ, ಮನೆಗಳ ಕಳ್ಳತನ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿವೆ. ಗ್ರಾಮೀಣ ಭಾಗದಲ್ಲಿ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುವುದು, ತೋಟಗಳಿಂದ ಬೆಳೆ ಕಳ್ಳತನ ಮಾಡುವ ಪ್ರಕರಣಗಳು ಹೆಚ್ಚುತ್ತಿವೆ. ಕಳ್ಳರ ಕೃತ್ಯಗಳಿಗೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮ ಆಗಬೇಕೆಂಬುದು ತಾಲೂಕಿನ ಜನರ ಆಗ್ರಹವಾಗಿದೆ.

 

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page