ಖಾಸಗಿ ಬಸ್ಸೊಂದು ಟ್ಯಾಂಕರ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ನಡೆದಿದೆ.
ಚಾಲುಕ್ಯ ಬಸ್ ಚಾಲಕನ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ಇದರಿಂದ ಬಸ್ ನ ಮುಂಭಾಗ ಹಾಗೂ ಟ್ಯಾಂಕರ್ ನ ಹಿಂಭಾಗ ಜಖಂಗೊಂಡಿದೆ.
ಬಸ್ ನಲ್ಲಿದ್ದ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.







