ಕಾರವಾರ: `ನಗರ ಪ್ರದೇಶಗಳಲ್ಲಿ ಇರುವಂತೆ ಗ್ರಾಮೀಣ ಪ್ರದೇಶಗಳಲ್ಲಿಯೂ ಶಿಶು ಪಾಲನಾ ಕೇಂದ್ರಗಳ ಅವಶ್ಯಕತೆಯನ್ನು ಅರಿತು ರಾಜ್ಯ ಸರ್ಕಾರ ಕೂಸಿನ ಮನೆ ಯೋಜನೆ ಅನುಷ್ಠಾನ ಮಾಡಿದ್ದು, ಅಧಿಕಾರಿಗಳೆಲ್ಲರೂ ಕೂಸಿನ ಮನೆ ಯೋಜನೆ ಯಶಸ್ಸಿಗೆ ಕೈಜೋಡಿಸಬೇಕು’ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ದಾಸಗುಪ್ತ ಅವರು ಹೇಳಿದರು.
ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು `ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಕೂಲಿ ಕೆಲಸಕ್ಕೆ ಬರುವ ಕಾರ್ಮಿಕರ ಕಂದಮ್ಮಗಳ ಆರೈಕೆಗೆ ಕೂಸಿನ ಮನೆ ಆಸರೆಯಾಗಿದೆ. ಇಲ್ಲಿ ಮಗುವಿಗೆ ಆಹಾರ, ಆರೋಗ್ಯ ಸೇರಿದಂತೆ ಲಾಲನೆ-ಪಾಲನೆಯನ್ನು ಮಾಡಲಾಗುತ್ತದೆ. ದೇಶದ ಭವಿಷ್ಯವಾದ ಮಕ್ಕಳಿಗೆ ಬಾಲ್ಯಾವಸ್ಥೆಯಲ್ಲಿ ಉತ್ತಮ ಆರೈಕೆ, ಪೌಷ್ಟಿಕಾಂಶಯುಕ್ತ ಆಹಾರ, ಕಲಿಕೆಗೆ ಉತ್ತಮ ಅಡಿಪಾಯದ ಅವಶ್ಯಕತೆಯಿದೆ. ಮಕ್ಕಳನ್ನು ಸಾಕಲು ಬಡ ಕುಟುಂಬಗಳಿಗಿರುವ ಅನಾನುಕೂಲಗಳನ್ನು ನೀಗಿಸಲು ಮತ್ತು ಕೆಲಸಕ್ಕೆಂದು ಹೋಗುವ ಮಹಿಳೆಯರಿಗೆ ಮಕ್ಕಳನ್ನು ಎಲ್ಲಿ ಬಿಡುವುದೆಂಬ ಚಿಂತೆಗೆ ಕೂಸಿನ ಮನೆ ಉತ್ತರವಾಗಿದೆ’ ಎಂದರು.
Discussion about this post