6
September 29, 2026

ಚಾಕುವಿನಿಂದ ಮಹಿಳೆಯ ಕುತ್ತಿಗೆ ಸೀಳಿದ ಯುವಕ

ಯುವಕನೊಬ್ಬ ಮಹಿಳೆಯ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊ*ಲೆ ಮಾಡಿದ ಘಟನೆ ಯಲ್ಲಾಪುರದ ಕಾಳಮ್ಮನಗರದಲ್ಲಿ ಶನಿವಾರ ನಡೆದಿದೆ.

ಕಾಳಮ್ಮನಗರದ ರಂಜಿತಾ ಮಲ್ಲಪ್ಪ ಬನ್ಸೋಡೆ (30) ಕೊಲೆಯಾದ ಮಹಿಳೆ. ಶನಿವಾರ ಮಧ್ಯಾಹ್ನದ ವೇಳೆಗೆ ಕಾಳಮ್ಮಮಗರದ ರಫೀಕ್ ಯಳ್ಳೂರ ಎಂಬಾತ ಈಕೆಯ ಕುತ್ತಿಗೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.

ಗಾಯಗೊಂಡ ಮಹಿಳೆಯನ್ನು ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಮಾರ್ಗಮಧ್ಯೆ ಆಕೆ ಮೃತಪಟ್ಟಿದ್ದಾರೆ.

ಈ ಕೊಲೆಗೆ ಕಾರಣ ಏನೆಂಬುದು ತಿಳಿದು ಬರಬೇಕಿದೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು, ನಾಪತ್ತೆಯಾದ ರಫೀಕ್ ಗಾಗಿ ಶೋಧ ನಡೆಸುತ್ತಿದ್ದಾರೆ.

You cannot copy content of this page