6
September 29, 2026

ಕಾಜಲವಾಡಾ ಕಾಡಿನಲ್ಲಿ ಹೆಣವಾದ ರಫೀಕ್: ಕೊಲೆಗೈದವ ನೇಣಿಗೆ ಶರಣು

ಯಲ್ಲಾಪುರದ ಕಾಳಮ್ಮನಗರದ ಬಳಿ‌ ಮಹಿಳೆಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ರಫೀಕ್ ಯಳ್ಳೂರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪಟ್ಟಣದ ಕಾಜಲವಾಡಾ ಸಮೀಪದ ಕಾಡಿನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೊಲೀಸರು ಆತನ ಪತ್ತೆಗಾಗಿ ತೀವ್ರ ಶೋಧ ನಡೆಸುತ್ತಿದ್ದರು. ರಾತ್ರಿ ವೇಳೆ ಕಾಜಲವಾಡಾ ಬಳಿಯ ಕಾಡಿನಲ್ಲಿ ಶವ ಪತ್ತೆಯಾಗಿದೆ.

ಕೊಲೆ ಮಾಡಿ ಪರಾರಿಯಾಗಿದ್ದ ರಫೀಕ್, ಈ ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಆತ್ಮಹತ್ಯೆಯ ನಿರ್ಧಾರಕ್ಕೆ ಬಂದಿರಬಹುದೆಂದು ಶಂಕಿಸಲಾಗಿದೆ.

You cannot copy content of this page