6
  • Latest
ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಾಗೋಡ ಆಲೆಮನೆ ಹಬ್ಬ ಇಂದು

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ ತಾಲೂಕಿನ ಮಾಗೋಡ ಕಾಲೋನಿಯಲ್ಲಿ 9 ನೇ ವರ್ಷದ ಆಲೆಮನೆ ಹಬ್ಬ ಜ.24 ರ ಸಂಜೆ ನಡೆಯಲಿದ್ದು, ಅದಕ್ಕಾಗಿ ಭರದಿಂದ ಸಿದ್ಧತೆಗಳು ನಡೆಯುತ್ತಿವೆ. ಆಲೆಮನೆ ಹಬ್ಬ ಸಮಿತಿಯ ನೇತೃತ್ವದಲ್ಲಿ ಕಾರ್ಯಕರ್ತರು ಸಿದ್ಧತೆಯಲ್ಲಿ ತೊಡಗಿದ್ದಾರೆ.

ಜ.24 ರಂದು ಸಂಜೆ 5 ರಿಂದ ರಾತ್ರಿ 11 ರವರೆಗೆ ಆಲೆಮನೆ ಹಬ್ಬ ನಡೆಯಲಿದೆ. ಸಮೀಪದ ವೀರಮಾರುತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಭಾರತಾಂಬೆಯ ಭಾವಚಿತ್ರ ಭವ್ಯ ಮೆರವಣಿಗೆ ನಡೆಯಲಿದ್ದು, ನಂತರ ಗೋಪೂಜೆ, ಸಭಾ ಪೂಜೆ, ಭಗವದ್ಗೀತಾ ಪಠಣ, ರಾಷ್ಟ್ರಗೀತೆಯೊಂದಿಗೆ ಆಲೆಮನೆ ಹಬ್ಬಕ್ಕೆ ಚಾಲನೆ ದೊರೆಯಲಿದೆ.

ADVERTISEMENT
ADVERTISEMENT

ಈ ಬಾರಿ 10 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ. ಮೂರು ಗಾಣಗಳ ಮೂಲಕ ಕಬ್ಬಿನಹಾಲು ಸಿದ್ಧಪಡಿಸಿ, 4 ಕೌಂಟರ್ ಗಳಲ್ಲಿ ವಿತರಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಜತೆಗೆ ಹಳ್ಳಿಯ ಬಗೆ ಬಗೆಯ ತಿಂಡಿ-ತಿನಿಸುಗಳನ್ನೂ ಸಹ ಉಚಿತವಾಗಿ ನೀಡಲಾಗುತ್ತದೆ.

Advertisement. Scroll to continue reading.

ಕಬ್ಬಿನಹಾಲು ಸಿದ್ಧಪಡಿಸುವುದು, ಕೌಂಟರ್ ಗಳ ಮೂಲಕ ವಿತರಿಸುವುದು, ತಿಂಡಿಗಳನ್ನು ತಯಾರಿಸುವುದು, ಪಾರ್ಕಿಂಗ್ ವ್ಯವಸ್ಥೆ ಹೀಗೆ ವಿವಿಧ ಕಾರ್ಯಗಳನ್ನು ಸಮರ್ಪಕವಾಗಿ ನಿಭಾಯಿಸುವುದಕ್ಕೆ ಆಲೆಮನೆ ಹಬ್ಬ ಸಮಿತಿಯ ನೂರಾರು ಕಾರ್ಯಕರ್ತರು ಶ್ರಮಿಸಲಿದ್ದಾರೆ. ಕಬ್ಬಿನಹಾಲಿನಿಂದ ಸಿದ್ಧಪಡಿಸಿದ ಬೆಲ್ಲ, ತೊಡದೇವು, ದೋಸೆ ಮುಂತಾದ ಖಾದ್ಯಗಳ ಮಾರಾಟಕ್ಕೂ ವ್ಯವಸ್ಥೆ ಮಾಡಲಾಗುತ್ತಿದೆ.

ಸಮಿತಿಯ ಅಧ್ಯಕ್ಷ ನರಸಿಂಹ ಭಟ್ಟ ಕುಂಕಿಮನೆ ಅವರ ಮಾರ್ಗದರ್ಶನದಲ್ಲಿ 50 ಕ್ಕೂ ಹೆಚ್ಚು ಕಾರ್ಯಕರ್ತರು ಒಂದು ವಾರದಿಂದ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಆಲೆಮನೆ ಹಬ್ಬ ಸಮಿತಿಯೊಂದಿಗೆ ಸ್ಥಳೀಯ ಅಭ್ಯುದಯ ಯುವಕ ಸಂಘ, ಶಾಲಾಭಿವೃದ್ಧಿ ಸಮಿತಿ, ಹಾಲು ಉತ್ಪಾದಕರ ಸಹಕಾರಿ ಸಂಘ ಮುಂತಾದ ಸಂಘಟನೆಗಳು ಹಾಗೂ ಸ್ಥಳೀಯರು ಕೈಜೋಡಿಸಿದ್ದಾರೆ.

ನಶಿಸುತ್ತಿರುವ ಆಲೆಮನೆ ಸಂಪ್ರದಾಯವನ್ನು ಉಳಿಸುವ ಪ್ರಯತ್ನವಾಗಿ, ಹಲವು ವಿಶೇಷತೆಗಳೊಂದಿಗೆ 9 ವರ್ಷಗಳ ಹಿಂದೆ ಆರಂಭವಾದದ್ದು ಮಾಗೋಡ ಆಲೆಮನೆ ಹಬ್ಬ. ವರ್ಷದಿಂದ ವರ್ಷಕ್ಕೆ ಮಾಗೋಡ ಆಲೆಮನೆ ಹಬ್ಬ ಜಿಲ್ಲಾದ್ಯಂತ ಜನಪ್ರಿಯತೆ ಪಡೆಯುತ್ತಿದೆ. ಅಚ್ಚುಕಟ್ಟಾದ ವ್ಯವಸ್ಥೆ, ಸಂಘಟನೆಯ ಶಿಸ್ತು ಪ್ರತಿ ವರ್ಷ ಆಲೆಮನೆ ಹಬ್ಬದ ಯಶಸ್ಸಿಗೆ ಕಾರಣವಾಗುತ್ತಿದೆ.

Advertisement. Scroll to continue reading.

ಮಾಗೋಡಿನ ಆಲೆಮನೆ ಹಬ್ಬದಿಂದ ಪ್ರೇರಿತರಾಗಿ ತಾಲೂಕಿನ ಬೇರೆ ಬೇರೆ ಗ್ರಾಮೀಣ ಭಾಗಗಳಲ್ಲಿಯೂ ಕಳೆದ ಕೆಲ ವರ್ಷಗಳಿಂದ ಆಲೆಮನೆ ಹಬ್ಬ ನಡೆಯುತ್ತಿರುವುದು ವಿಶೇಷ.

ಇಲ್ಲಿನ ಸಾರ್ವಜನಿಕ ಗಜಾನನೋತ್ಸವ ವೇದಿಕೆಯಲ್ಲಿ ವಿವಿಧ ಸಾಂಸ್ಕೃತಿಕ ವೈಭವ ಅನಾವರಣಗೊಳ್ಳಲಿದೆ. ಡೊಳ್ಳು ಕುಣಿತ, ಯಕ್ಷ ಸಂಗೀತ, ತಾಳಮದ್ದಲೆ, ಸ್ಥಳೀಯ ಕಲಾವಿದರ ಹಾಡು, ನೃತ್ಯ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿವೆ.

ShareSendTweetShare
ADVERTISEMENT
Previous Post

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

Next Post

ಏಪ್ರಿಲ್ ನಲ್ಲಿ ತೆರೆಗೆ ಬರಲಿದೆ ‘ರಾಜನಿವಾಸ’

Next Post
ಏಪ್ರಿಲ್ ನಲ್ಲಿ ತೆರೆಗೆ ಬರಲಿದೆ ‘ರಾಜನಿವಾಸ’

ಏಪ್ರಿಲ್ ನಲ್ಲಿ ತೆರೆಗೆ ಬರಲಿದೆ 'ರಾಜನಿವಾಸ'

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಟಿವಿ9 ಕನ್ನಡ ವತಿಯಿಂದ ಲೈಫ್​ಸ್ಟೈಲ್ ಆಟೊ, ಫರ್ನಿಚರ್ ಎಕ್ಸ್​ಪೋ 2026 ಆರಂಭ ; ಇದು ಬೆಂಗಳೂರಿನ ಅತಿದೊಡ್ಡ ಮೇಳ

ಟಿವಿ9 ಕನ್ನಡ ವತಿಯಿಂದ ಲೈಫ್​ಸ್ಟೈಲ್ ಆಟೊ, ಫರ್ನಿಚರ್ ಎಕ್ಸ್​ಪೋ 2026 ಆರಂಭ ; ಇದು ಬೆಂಗಳೂರಿನ ಅತಿದೊಡ್ಡ ಮೇಳ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.