ಕುಮಟಾ: `ಬಿಜೆಪಿ ಆಡಳಿತ ಅವಧಿಯಲ್ಲಿ ಶುರುವಾದ ಜನಸ್ಪಂದನಾ ಕಾರ್ಯಕ್ರಮ ನಿಂತು ಹೋಗಿದ್ದು, ಇದೀಗ ಮತ್ತೆ ಶುರುವಾಗಿದೆ. ನಿಮ್ಮ ಯಾವುದೇ ಸಮಸ್ಯೆ ಇದ್ದರೂ ನನಗೆ ತಿಳಿಸಿ. ನಾನು ಅದಕ್ಕೆ ಪರಿಹಾರ ಸೂಚಿಸುತ್ತೇನೆ’ ಎಂದು ಕುಮಟಾ ಶಾಸಕ ದಿನಕರ ಶೆಟ್ಟಿ ಹೇಳಿದ್ದಾರೆ.
ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು `ಪ್ರತಿ ಗ್ರಾಮದಲ್ಲಿಯೂ ಜನಸ್ಪಂದನಾ ಕಾರ್ಯಕ್ರಮ ನಡೆಸಲಾಗುತ್ತದೆ. ನೇರವಾಗಿ ಸರ್ಕಾರಿ ಕೆಲಸ ಮಾಡಿಸಿಕೊಳ್ಳಲು ಇದು ಒಂದು ಉತ್ತಮ ವೇದಿಕೆ’ ಎಂದು ಹೇಳಿದರು. `ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಾರೆ. ಸರ್ಕಾರ ಬದಲಾದಾಗ ಅಧಿಕಾರಿಗಳು ಬದಲಾಗುತ್ತಾರೆ’ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
Discussion about this post