6
  • Latest
ಶಾಲಾ-ಕಾಲೇಜು ಸಮಯಕ್ಕೆ ಬಾರದ ಬಸ್: ಹೆಚ್ಚುವರಿ ಬಸ್‌ಗೆ ಆಗ್ರಹಿಸಿ ದೇವಗಿರಿಯಲ್ಲಿ ವಿದ್ಯಾರ್ಥಿಗಳ ಧಿಡೀರ್ ಪ್ರತಿಭಟನೆ

ಶಾಲಾ-ಕಾಲೇಜು ಸಮಯಕ್ಕೆ ಬಾರದ ಬಸ್: ಹೆಚ್ಚುವರಿ ಬಸ್‌ಗೆ ಆಗ್ರಹಿಸಿ ದೇವಗಿರಿಯಲ್ಲಿ ವಿದ್ಯಾರ್ಥಿಗಳ ಧಿಡೀರ್ ಪ್ರತಿಭಟನೆ

ದರೋಡೆ ಮಾಡಿದ ಆರೋಪಿಗಳಿಗೆ 10 ವರ್ಷಗಳ ಜೈಲು ಶಿಕ್ಷೆ–ದಂಡ

ದರೋಡೆ ಮಾಡಿದ ಆರೋಪಿಗಳಿಗೆ 10 ವರ್ಷಗಳ ಜೈಲು ಶಿಕ್ಷೆ–ದಂಡ

ದಶಕಗಳ ಕಾಯುವಿಕೆಗೆ ತೆರೆ: ಗುರುರಾಯಪಟ್ಟಣದ 150 ಕುಟುಂಬಗಳಿಗೆ ಶಾಶ್ವತ ಮನೆ ಮಾಲಿಕತ್ವ!

ಗುರುರಾಯಪಟ್ಟಣದ 150 ಕುಟುಂಬಗಳಿಗೆ ಶಾಶ್ವತ ಮನೆ ಮಾಲಿಕತ್ವ: ಹಕ್ಕುಪತ್ರ ವಿತರಿಸಿದ ಶಾಸಕ ಮಾನೆ ಶ್ರೀನಿವಾಸ

ದಶಕಗಳ ಕಾಯುವಿಕೆಗೆ ತೆರೆ: ಗುರುರಾಯಪಟ್ಟಣದ 150 ಕುಟುಂಬಗಳಿಗೆ ಶಾಶ್ವತ ಮನೆ ಮಾಲಿಕತ್ವ!

ದಶಕಗಳ ಕಾಯುವಿಕೆಗೆ ತೆರೆ: ಗುರುರಾಯಪಟ್ಟಣದ 150 ಕುಟುಂಬಗಳಿಗೆ ಶಾಶ್ವತ ಮನೆ ಮಾಲಿಕತ್ವ!

ADVERTISEMENT
  • Home
Thursday, September 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ಶಾಲಾ-ಕಾಲೇಜು ಸಮಯಕ್ಕೆ ಬಾರದ ಬಸ್: ಹೆಚ್ಚುವರಿ ಬಸ್‌ಗೆ ಆಗ್ರಹಿಸಿ ದೇವಗಿರಿಯಲ್ಲಿ ವಿದ್ಯಾರ್ಥಿಗಳ ಧಿಡೀರ್ ಪ್ರತಿಭಟನೆ

Kiran Reporter Haveri by Kiran Reporter Haveri
September 3, 2026
in ಸ್ಥಳೀಯ
advt advt advt
ADVERTISEMENT

ಹಾವೇರಿ: ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಮಯಕ್ಕೆ ಸರಿಯಾಗಿ ಬಸ್‌ಗಳನ್ನು ಓಡಿಸಬೇಕು ಹಾಗೂ ದೇವಗಿರಿ ಗ್ರಾಮಕ್ಕೆ ಹೆಚ್ಚುವರಿ ಬಸ್‌ಗಳನ್ನು ಬಿಡಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ತಡವಾಗಿ ಬಂದ ಬಸ್‌ಗಳನ್ನು ತಡೆದು ಧಿಡೀರ್ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳ ಹೋರಾಟಕ್ಕೆ ಎಸ್‌ಎಫ್‌ಐ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿದರು.

ADVERTISEMENT

ಹಾವೇರಿ ತಾಲ್ಲೂಕಿನ ದೇವಗಿರಿ ಗ್ರಾಮದಲ್ಲಿ ಶಾಲಾ-ಕಾಲೇಜು ಸಮಯಕ್ಕೆ ಸಮರ್ಪಕವಾಗಿ ಬಸ್‌ಗಳು ಸಂಚರಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಪ್ರತಿನಿತ್ಯ ವಿದ್ಯಾರ್ಥಿಗಳು ಪರದಾಡುವಂತಾಗಿದ್ದು, ಹಲವು ಬಾರಿ ಮನವಿ ಮಾಡಿದರೂ ಸಮಸ್ಯೆ ಬಗೆಹರಿಯದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸಿದರು.

ADVERTISEMENT
ADVERTISEMENT

ಈ ವೇಳೆ ವಿದ್ಯಾರ್ಥಿಗಳು ಹಾಗೂ ಸಾರಿಗೆ ಸಿಬ್ಬಂದಿ ನಡುವೆ ವಾಗ್ವಾದ ನಡೆಯಿತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಸ್ಥಳಕ್ಕೆ ಆಗಮಿಸಿದರೂ, ವಿದ್ಯಾರ್ಥಿಗಳು ತಮ್ಮ ಬೇಡಿಕೆ ಈಡೇರುವವರೆಗೆ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಪಟ್ಟುಹಿಡಿದರು.

Advertisement. Scroll to continue reading.

ನಂತರ ವಿದ್ಯಾರ್ಥಿಗಳು ಎಸ್‌ಎಫ್‌ಐ ಕಾರ್ಯಕರ್ತರನ್ನು ಸಂಪರ್ಕಿಸಿದ್ದು, ಸ್ಥಳಕ್ಕೆ ಆಗಮಿಸಿದ ಎಸ್‌ಎಫ್‌ಐ ಮುಖಂಡರು ಹಾಗೂ ಕಾರ್ಯಕರ್ತರು ವಿದ್ಯಾರ್ಥಿಗಳೊಂದಿಗೆ ಸಭೆ ನಡೆಸಿ ಅವರ ಹೋರಾಟಕ್ಕೆ ಬೆಂಬಲ ಘೋಷಿಸಿದರು.

ಸುಮಾರು ಮೂರು-ನಾಲ್ಕು ಗಂಟೆಗಳ ಕಾಲ ಪ್ರತಿಭಟನೆ ನಡೆದರೂ ಸಂಬಂಧಪಟ್ಟ ಜವಾಬ್ದಾರಿಯುತ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸದಿರುವುದಕ್ಕೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿ ಕೆಲಕಾಲ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.

ಬಳಿಕ ದೇವಗಿರಿಯಿಂದ ಹಾವೇರಿ ಜಿಲ್ಲಾಧಿಕಾರಿ ಕಚೇರಿವರೆಗೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಜಿಲ್ಲಾಧಿಕಾರಿ ವಿಜಯಮಹಾಂತೇಶ್ ದಾನಮ್ಮನವರ ಅವರನ್ನು ಭೇಟಿ ಮಾಡಿ, ದೇವಗಿರಿ ಗ್ರಾಮಕ್ಕೆ ಶಾಲಾ-ಕಾಲೇಜು ಸಮಯಕ್ಕೆ ಸರಿಯಾಗಿ ಬಸ್‌ಗಳ ವ್ಯವಸ್ಥೆ ಮಾಡಬೇಕು ಹಾಗೂ ಹೆಚ್ಚುವರಿ ಬಸ್‌ಗಳನ್ನು ಬಿಡಬೇಕು ಎಂದು ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದರು.

ಇತ್ತ ಪ್ರತಿಭಟನೆ ಅಂತಿಮ ಹಂತಕ್ಕೆ ತಲುಪಿದ ಬಳಿಕ ಕೆಎಸ್‌ಆರ್‌ಟಿಸಿ ಘಟಕ ವ್ಯವಸ್ಥಾಪಕರು ಸ್ಥಳಕ್ಕೆ ಆಗಮಿಸಿದರು. ಈ ವೇಳೆ ವಿದ್ಯಾರ್ಥಿಗಳು, “ನಮ್ಮ ಸಮಸ್ಯೆಗಳನ್ನು ನಾವು ನೆಲದ ಮೇಲೆ ಕುಳಿತು ಹೋರಾಟ ಮಾಡುತ್ತಿದ್ದೇವೆ. ನೀವು ಕೂಡ ನಮ್ಮೊಂದಿಗೆ ನೆಲದ ಮೇಲೆ ಕುಳಿತು ಸಮಸ್ಯೆ ಆಲಿಸಬೇಕು” ಎಂದು ಪಟ್ಟುಹಿಡಿದರು.

Advertisement. Scroll to continue reading.
Advertisement. Scroll to continue reading.

ವಿದ್ಯಾರ್ಥಿಗಳ ಒತ್ತಾಯದ ಮೇರೆಗೆ ಘಟಕ ವ್ಯವಸ್ಥಾಪಕರು ನೆಲದ ಮೇಲೆ ಕುಳಿತು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದರು. ದೇವಗಿರಿ ಗ್ರಾಮಕ್ಕೆ ಬಸ್‌ಗಳ ಸಂಚಾರದ ಸಮಸ್ಯೆ ಹಾಗೂ ಹೆಚ್ಚುವರಿ ಬಸ್‌ಗಳ ಬೇಡಿಕೆಯನ್ನು ಪರಿಶೀಲಿಸಿ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಕಲ್ಪಿಸುವುದಾಗಿ ಭರವಸೆ ನೀಡಿದರು.

ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ದೇವಗಿರಿ ಗ್ರಾಮದಲ್ಲಿ ಕೆಲಕಾಲ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.

Tags: #students #studentsprotest #haverinews #shreekarnataka
ShareSendTweetShare
ADVERTISEMENT
Previous Post

ಗುರುರಾಯಪಟ್ಟಣದ 150 ಕುಟುಂಬಗಳಿಗೆ ಶಾಶ್ವತ ಮನೆ ಮಾಲಿಕತ್ವ: ಹಕ್ಕುಪತ್ರ ವಿತರಿಸಿದ ಶಾಸಕ ಮಾನೆ ಶ್ರೀನಿವಾಸ

Next Post

ದರೋಡೆ ಮಾಡಿದ ಆರೋಪಿಗಳಿಗೆ 10 ವರ್ಷಗಳ ಜೈಲು ಶಿಕ್ಷೆ–ದಂಡ

Next Post
ದರೋಡೆ ಮಾಡಿದ ಆರೋಪಿಗಳಿಗೆ 10 ವರ್ಷಗಳ ಜೈಲು ಶಿಕ್ಷೆ–ದಂಡ

ದರೋಡೆ ಮಾಡಿದ ಆರೋಪಿಗಳಿಗೆ 10 ವರ್ಷಗಳ ಜೈಲು ಶಿಕ್ಷೆ–ದಂಡ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

×

No WhatsApp Number Found!