6
  • Latest
ಹಾನಗಲ್‌ನಲ್ಲಿ ‘ಪ್ರಜಾ ಸೇವೆ’ಗೆ ಚಾಲನೆ

ಹಾನಗಲ್‌ನಲ್ಲಿ ‘ಪ್ರಜಾ ಸೇವೆ’ಗೆ ಚಾಲನೆ

ಪ್ರಜಾ ಸೇವೆಯಲ್ಲಿ ಸಚಿವ ರುದ್ರಪ್ಪ ಲಮಾಣಿ

ಪ್ರಜಾ ಸೇವೆಯಲ್ಲಿ ಸಚಿವ ರುದ್ರಪ್ಪ ಲಮಾಣಿ

ರಾಜ್ಯದಲ್ಲಿಯೇ ಹಾವೇರಿ ಜಿಲ್ಲೆಗೆ ನಂಬರ್ ಒನ್ ಪಟ್ಟ! ಕಾರಣವೇನು ಗೊತ್ತಾ?

ರಾಜ್ಯದಲ್ಲಿಯೇ ಹಾವೇರಿ ಜಿಲ್ಲೆಗೆ ನಂಬರ್ ಒನ್ ಪಟ್ಟ! ಕಾರಣವೇನು ಗೊತ್ತಾ?

ಉತ್ತರ ಕರ್ನಾಟಕದಲ್ಲಿ ಕಬ್ಬಿಗೆ ಒಂದೇ ದರ ನಿಗದಿಪಡಿಸಬೇಕು

ಉತ್ತರ ಕರ್ನಾಟಕದಲ್ಲಿ ಕಬ್ಬಿಗೆ ಒಂದೇ ದರ ನಿಗದಿಪಡಿಸಬೇಕು

ADVERTISEMENT
  • Home
Saturday, September 5, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ಹಾನಗಲ್‌ನಲ್ಲಿ ‘ಪ್ರಜಾ ಸೇವೆ’ಗೆ ಚಾಲನೆ

Kiran Reporter Haveri by Kiran Reporter Haveri
September 5, 2026
in ಸ್ಥಳೀಯ
advt advt advt
ADVERTISEMENT

ಹಾನಗಲ್‌ನಲ್ಲಿ ‘ಪ್ರಜಾ ಸೇವೆ’ಗೆ ಚಾಲನೆ: ಅಹವಾಲು ಸಲ್ಲಿಸಲು ನೂರಾರು ಜನರ ಆಗಮನ

ಹಾನಗಲ್: ಸರ್ಕಾರವೇ ಜನರ ಮನೆ ಬಾಗಿಲಿಗೆ ತೆರಳಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಅಹವಾಲುಗಳಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ರಾಜ್ಯಾದ್ಯಂತ ಆರಂಭಿಸಿರುವ ‘ಪ್ರಜಾ ಸೇವೆ’ ಕಾರ್ಯಕ್ರಮಕ್ಕೆ ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ಶನಿವಾರ ಚಾಲನೆ ನೀಡಲಾಯಿತು.

ADVERTISEMENT

ಹಾನಗಲ್ ಪಟ್ಟಣದ ಶ್ರೀ ಕುಮಾರೇಶ್ವರ ಮಠದಲ್ಲಿ ನಡೆದ ಕಾರ್ಯಕ್ರಮಕ್ಕೆ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಅವರು ಚಾಲನೆ ನೀಡಿದರು.

ADVERTISEMENT
ADVERTISEMENT

ಕಾರ್ಯಕ್ರಮದಲ್ಲಿ ಹಾನಗಲ್ ಶಾಸಕ ಶ್ರೀನಿವಾಸ ಮಾನೆ, ಹಾವೇರಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Advertisement. Scroll to continue reading.

‘ಪ್ರಜಾ ಸೇವೆ’ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಿಂದ ವಿವಿಧ ಸಮಸ್ಯೆಗಳು ಹಾಗೂ ಅಹವಾಲುಗಳನ್ನು ಸ್ವೀಕರಿಸಲಾಯಿತು. ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ನಿರೀಕ್ಷೆಯಲ್ಲಿ ಹಾನಗಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಂದ ನೂರಾರು ಜನರು ಕಾರ್ಯಕ್ರಮಕ್ಕೆ ಆಗಮಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಿದರು.

Advertisement. Scroll to continue reading.

ಕಂದಾಯ, ಪಂಚಾಯತ್ ರಾಜ್, ಕೃಷಿ, ಶಿಕ್ಷಣ, ಆರೋಗ್ಯ, ಸಮಾಜ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಸಾರ್ವಜನಿಕರು ಅಧಿಕಾರಿಗಳ ಗಮನಕ್ಕೆ ತಂದರು.

Advertisement. Scroll to continue reading.

ಸರ್ಕಾರಿ ಕಚೇರಿಗಳಿಗೆ ತೆರಳಿ ಅಧಿಕಾರಿಗಳನ್ನು ಭೇಟಿಯಾಗಲು ಸಾರ್ವಜನಿಕರು ಎದುರಿಸುವ ತೊಂದರೆಗಳನ್ನು ಕಡಿಮೆ ಮಾಡಿ, ಸರ್ಕಾರವೇ ಜನರ ಬಳಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸುವುದು ‘ಪ್ರಜಾ ಸೇವೆ’ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯಾದ್ಯಂತ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ಅದರ ಭಾಗವಾಗಿ ಹಾವೇರಿ ಜಿಲ್ಲೆಯಲ್ಲೂ ಸಚಿವ ರುದ್ರಪ್ಪ ಲಮಾಣಿ ಅವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಆರಂಭಿಸಲಾಗಿದೆ.

ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಅಧಿಕಾರಿಗಳು, ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲು ಹಾಗೂ ಬಾಕಿ ಇರುವ ಅರ್ಜಿಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ShareSendTweetShare
ADVERTISEMENT
Previous Post

ಪ್ರಜಾ ಸೇವೆಯಲ್ಲಿ ಸಚಿವ ರುದ್ರಪ್ಪ ಲಮಾಣಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.