ಹಾವೇರಿ: ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಪೆಂಡಾಲ್, ಬ್ಯಾನರ್, ಬಂಟಿಂಗ್ಸ್ ಹಾಗೂ ಡಿಜೆ ಮಾಲೀಕರ ಸಭೆಯನ್ನು ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ ನಡೆಸಲಾಯಿತು.
ಎಸ್‌ಪಿ ಯಶೋಧ ವಂಟಗೋಡಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗಣೇಶೋತ್ಸವವನ್ನು ಶಾಂತಿಯುತವಾಗಿ ಹಾಗೂ ಸುವ್ಯವಸ್ಥಿತವಾಗಿ ಆಚರಿಸುವ ಕುರಿತು ಅಗತ್ಯ ಕಾನೂನು ಮತ್ತು ಸುರಕ್ಷತಾ ಮಾರ್ಗಸೂಚಿಗಳನ್ನು ತಿಳಿಸಲಾಯಿತು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಪೊಲೀಸ್ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಮಾಲೀಕರಿಗೆ ಸೂಚಿಸಲಾಯಿತು




