ಹಾವೇರಿ: ಗಣೇಶ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಡಳಿತ ಮಹತ್ವದ ಆದೇಶ ಹೊರಡಿಸಿದೆ.
ಜಿಲ್ಲೆಯಲ್ಲಿ ಸೆಪ್ಟೆಂಬರ್ 14ರಿಂದ ಗಣೇಶ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಡಿಜೆ ಸೌಂಡ್ ಸಿಸ್ಟಂ ಹಾಗೂ ಹಬ್ಬದ ಸಂದರ್ಭದಲ್ಲಿ ಬಳಸುವ ಶಬ್ದ ವರ್ಧಕ ಸಾಧನಗಳ ಬಳಕೆಯನ್ನು ನಿಷೇಧಿಸಲಾಗಿದೆ.
ಗಣೇಶ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಶಬ್ದದಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಾಗೂ ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಈ ಕುರಿತು ಹಾವೇರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಆದೇಶ ಹೊರಡಿಸಿದ್ದಾರೆ. ಗಣೇಶೋತ್ಸವ ಆಚರಣೆ ವೇಳೆ ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸುವಂತೆ ಸಾರ್ವಜನಿಕರಿಗೆ ತಿಳಿಸಲಾಗಿದೆ.




