ಹಾವೇರಿ: ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡುವವರೆಗೆ ಸಕ್ಕರೆ ಕಾರ್ಖಾನೆ ಆರಂಭಿಸಬಾರದು ಎಂದು ಆಗ್ರಹಿಸಿ ಮನವಿ ಸಲ್ಲಿಸಿದ್ದರೂ, ಕಾರ್ಖಾನೆ ಆರಂಭಿಸಲಾಗಿದೆ ಎಂದು ಆರೋಪಿಸಿ ಕಬ್ಬು ಬೆಳೆಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾವೇರಿ ತಾಲೂಕಿನ ಸಂಗೂರು ಗ್ರಾಮದ ಬಳಿಯಿರುವ ಜಿ.ಎಂ. ಶುಗರ್ಸ್ ಸಕ್ಕರೆ ಕಾರ್ಖಾನೆ ರೈತರ ಮನವಿಗೆ ಸ್ಪಂದಿಸದೇ ಕಾರ್ಖಾನೆ ಆರಂಭಿಸಿದೆ ಎಂದು ರೈತರು ಆರೋಪಿಸಿದ್ದಾರೆ.
ಕಬ್ಬಿನ ಬೆಲೆ ನಿಗದಿ ಮಾಡುವವರೆಗೆ ಕಾರ್ಖಾನೆ ಆರಂಭಿಸಬಾರದು ಎಂದು ರೈತರು ಈ ಹಿಂದೆ ಮನವಿ ಮಾಡಿದ್ದರು. ಆದರೆ ರೈತರ ಮನವಿಗೆ ಬೆಲೆ ನೀಡದೆ ಕಾರ್ಖಾನೆ ಆರಂಭಿಸಲಾಗಿದೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು.
ಇದೇ ವೇಳೆ ಬೆಲ್ಲ ಹಾಗೂ ಸಕ್ಕರೆಯ ಬೆಲೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನಿಗದಿ ಮಾಡಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ರೈತರು ಒತ್ತಾಯಿಸಿದ್ದಾರೆ.
ಕಬ್ಬಿನ ಬೆಲೆ ನಿಗದಿಯಾಗುವವರೆಗೆ ಕಾರ್ಖಾನೆ ಆರಂಭಿಸಬಾರದು ಎಂಬ ಬೇಡಿಕೆಯನ್ನು ಈಡೇರಿಸದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರು ಕಾರ್ಖಾನೆ ಮುಂಭಾಗದಲ್ಲಿರುವ ರಾಜ್ಯ ಹೆದ್ದಾರಿಗೆ ಕಬ್ಬು ಸುರಿದು ಪ್ರತಿಭಟನೆ ನಡೆಸಿದರು.
ಕಬ್ಬು ಬೆಳೆಗಾರರ ಬೇಡಿಕೆಗೆ ಸರ್ಕಾರ ಹಾಗೂ ಕಾರ್ಖಾನೆ ಆಡಳಿತ ಮಂಡಳಿ ಸ್ಪಂದಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.




