6
September 28, 2026

ಬ್ಯಾಡಗಿಯ ತೌಸೀಫ್ ಕಲ್ಮನಿಗೆ ಗೌರವ ಡಾಕ್ಟರೇಟ್

ಬ್ಯಾಡಗಿ: ತೌಸೀಫ್ ಜೆ. ಕಲ್ಮನಿಗೆ ಗೌರವ ಡಾಕ್ಟರೇಟ್ ಪ್ರದಾನ
ಹಾವೇರಿ ಜಿಲ್ಲೆ ಬ್ಯಾಡಗಿ ನಗರದ ನಿವಾಸಿ ಹಾಗೂ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಕೂಬಿಹಾಳ ಗ್ರಾಮದ ಎಸ್.ಯು.ಎಸ್.ಜೆ. ಸಂಯುಕ್ತ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ತೌಸೀಫ್ ಜೆ. ಕಲ್ಮನಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದೆ.
ಹೊಸೂರಿನಲ್ಲಿ ಏಷ್ಯಾ ಇಂಟರ್‌ನ್ಯಾಷನಲ್ ಕಲ್ಚರಲ್ ರಿಸರ್ಚ್ ಯೂನಿವರ್ಸಿಟಿ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು. ಶಿಕ್ಷಣ ಹಾಗೂ ಸಮಾಜ ಸೇವೆಯಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ತೌಸೀಫ್ ಜೆ. ಕಲ್ಮನಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.
ಸಮಾರಂಭದಲ್ಲಿ ಡಾ. ಕೆ.ಎ. ಮನೋಕರನ್, ಡಾ. ಕೃಷ್ಣಮೂರ್ತಿ ಮಹಾಸ್ವಾಮಿಗಳು, ಮನೋಜ್ ಆರ್., ಡಾ. ರವಿಕುಮಾರ ಎಲ್., ಡಾ. ಕಾಳೇಗೌಡ ಹಾಗೂ ಡಾ. ಸುನೀಲ್ ಎಸ್. ಪವಾರ್ ಉಪಸ್ಥಿತರಿದ್ದರು.
ತೌಸೀಫ್ ಜೆ. ಕಲ್ಮನಿ ಅವರಿಗೆ ಎಸ್.ಯು.ಎಸ್.ಜೆ. ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಪ್ರೌಢಶಾಲೆಯ ಮುಖ್ಯ ಶಿಕ್ಷಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಹಳೆಯ ವಿದ್ಯಾರ್ಥಿಗಳ ಬಳಗ, ಕೂಬಿಹಾಳ ಗ್ರಾಮದ ಗುರು-ಹಿರಿಯರು ಹಾಗೂ ಸಮಸ್ತ ನಾಗರಿಕರು ಅಭಿನಂದನೆ ಸಲ್ಲಿಸಿದ್ದಾರೆ.

You cannot copy content of this page