6

ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

ಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ

ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹಾವೇರಿಯಲ್ಲಿ ಮಾತನಾಡಿದ ಅವರು, ಎಸ್‌ಐಆರ್‌ ಪ್ರಕ್ರಿಯೆ ಆರಂಭದ ಹಂತದಲ್ಲಿ ಕಾಂಗ್ರೆಸ್‌ನವರು ಮಸೀದಿಗಳಲ್ಲಿ ಸೇರಿದಂತೆ ವಿವಿಧೆಡೆ ಪ್ರಕ್ರಿಯೆ ನಡೆಸುತ್ತಿದ್ದ ಬಗ್ಗೆ ತಾವು ಆಕ್ಷೇಪ ವ್ಯಕ್ತಪಡಿಸಿದ್ದೆವು. ಆದರೆ ಇದೀಗ ಎಸ್‌ಐಆರ್‌ ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಹೇಳಿದರು.

ಕಾಂಗ್ರೆಸ್‌ ವಿರುದ್ಧ ಆರೋಪ ಮಾಡಿದ ಬೊಮ್ಮಾಯಿ, ಕಳೆದ 20 ವರ್ಷಗಳಿಂದ ಎರಡೆರಡು ಕಡೆ ಮತಗಳನ್ನು ಹಾಕಿಸಿಕೊಂಡು, ಮೃತಪಟ್ಟವರ ಹೆಸರಿನಲ್ಲಿಯೂ ಮತಗಳನ್ನು ಹಾಕಿಸಿಕೊಂಡು ಹಾಗೂ ಡುಪ್ಲಿಕೇಟ್‌ ಮತಗಳನ್ನು ಬಳಸಿಕೊಂಡು ಚುನಾವಣೆಗಳಲ್ಲಿ ಗೆಲ್ಲುತ್ತಿದ್ದರು. ಇದೀಗ ಎಸ್‌ಐಆರ್‌ ಪ್ರಕ್ರಿಯೆಯಿಂದ ಅವರಿಗೆ ತೊಂದರೆಯಾಗಿದೆ ಎಂದು ಆರೋಪಿಸಿದರು.

“ನಕಲಿ ಮತಗಳ ರಕ್ಷಣೆಗಾಗಿ ಡಿ.ಕೆ. ಶಿವಕುಮಾರ್‌ ಅವರು ಚುನಾವಣಾಧಿಕಾರಿಗಳ ಕಚೇರಿ ಮುಂದೆ ಹೈಡ್ರಾಮಾ ಮಾಡಿದ್ದಾರೆ” ಎಂದು ಬೊಮ್ಮಾಯಿ ಟೀಕಿಸಿದರು.

ಅರ್ಹ ಮತದಾರರ ಮತಗಳು ಯಾವುದೇ ಕಾರಣಕ್ಕೂ ಕೈತಪ್ಪಬಾರದು. ಅದೇ ವೇಳೆ ಅರ್ಹತೆ ಇಲ್ಲದವರ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರಬಾರದು. ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಸಂಪೂರ್ಣವಾಗಿ ಕಾನೂನುಬದ್ಧವಾಗಿ ನಡೆಯಬೇಕು ಎಂದು ಅವರು ಹೇಳಿದರು.

ಖರ್ಗೆ ಹೇಳಿಕೆಗೆ ಬೊಮ್ಮಾಯಿ ತಿರುಗೇಟು

ಎಸ್‌ಐಆರ್‌ ನಂತರ ಚುನಾವಣೆ ನಡೆದ ರಾಜ್ಯಗಳಲ್ಲಿ ಬಂದಿರುವ ಸರ್ಕಾರಗಳನ್ನು ವಜಾಗೊಳಿಸಬೇಕು ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಬೊಮ್ಮಾಯಿ, ಕಾಂಗ್ರೆಸ್‌ ಎಲ್ಲಾ ಕಡೆ ಸೋತಿರುವುದರಿಂದ ಇಂತಹ ಕುಂಟು ನೆಪಗಳನ್ನು ಹೇಳುತ್ತಿದೆ ಎಂದು ಟೀಕಿಸಿದರು.

ಚುನಾವಣೆಯಲ್ಲಿ ಸೋಲಿಗೆ ಕಾರಣವೇನು ಎಂಬುದನ್ನು ಕಾಂಗ್ರೆಸ್‌ ನಾಯಕರು ಹಾಗೂ ಕಾರ್ಯಕರ್ತರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದರು.

ಜಂತರ್‌ ಮಂತರ್‌ ಪ್ರತಿಭಟನೆಗೂ ಟೀಕೆ

ದೆಹಲಿಯ ಜಂತರ್‌ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ವಿರುದ್ಧ ನಡೆದ ಪ್ರತಿಭಟನೆ ಕುರಿತು ಮಾತನಾಡಿದ ಬೊಮ್ಮಾಯಿ, ಕೆಲವರಿಗೆ ದೇಶದ ಪ್ರಗತಿಯನ್ನು ನೋಡಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು.

ಕಾಂಗ್ರೆಸ್‌ ಹಾಗೂ ಅದರ ಮಿತ್ರ ಪಕ್ಷಗಳಿಗೆ ದೇಶದಲ್ಲಿ ಧಂಗೆ ಸೃಷ್ಟಿಸುವ ಉದ್ದೇಶವಿದೆ ಎಂದು ಬೊಮ್ಮಾಯಿ ಆರೋಪಿಸಿದರು. ಆದರೆ ಇಂತಹ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ. ದೇಶದ ಜನರು ಇದಕ್ಕೆ ಸೊಪ್ಪು ಹಾಕುವುದಿಲ್ಲ ಎಂದು ಅವರು ಹೇಳಿದರು.

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಅರ್ಹ ಮತದಾರರ ಹಕ್ಕುಗಳನ್ನು ರಕ್ಷಿಸುವುದರ ಜೊತೆಗೆ, ಅರ್ಹತೆ ಇಲ್ಲದ ಹೆಸರುಗಳನ್ನು ಕಾನೂನುಬದ್ಧವಾಗಿ ತೆಗೆದುಹಾಕಬೇಕು ಎಂಬುದು ಮುಖ್ಯ ಎಂದು ಬೊಮ್ಮಾಯಿ ಒತ್ತಿ ಹೇಳಿದರು.

  • Related Posts

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    ಅಂಬೇಡ್ಕರ್ ಅನುಯಾಯಿಗಳಿಗೆ ಗುಡ್‌ನ್ಯೂಸ್..!

    Share this… Facebook Pinterest Twitter Linkedin Whatsappದೀಕ್ಷಾ ಭೂಮಿ ಯಾತ್ರೆಗೆ ಡಾ.ಬಿ.ಆರ್.ಅಂಬೇಡ್ಕರ ಅನುಯಾಯಿಗಳ ಆಯ್ಕೆಗೆ ಅರ್ಜಿ ಆಹ್ವಾನ ಹಾವೇರಿ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2026-27ನೇ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿಯಲ್ಲಿ ಅಕ್ಟೋಬರ್ 21 ರಂದು ಜರುಗುವ ಪ್ರವರ್ತನಾ ದಿನಕ್ಕೆ(ವಿಜಯದಶಮಿ…

    You cannot copy content of this page