6

ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

ಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ

ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ ಪಡೆದುಕೊಂಡು, 10 ಕೆಜಿ 765 ಗ್ರಾಂ ಗಾಂಜಾ ಹಾಗೂ ಕಾರನ್ನು ಜಪ್ತಿ ಮಾಡಿದ್ದಾರೆ.

ಹಾವೇರಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯ ತರಳಬಾಳು ನಗರದ ಸಮೀಪ, ಡಿಸಿ ಕಚೇರಿಗೆ ತೆರಳುವ ಸಾರ್ವಜನಿಕ ರಸ್ತೆಯ ಬದಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು.

ಈ ಹಿನ್ನೆಲೆಯಲ್ಲಿ ಅ.03ರಂದು ಮಧ್ಯಾಹ್ನ 1.30ರ ಸುಮಾರಿಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಪೊಲೀಸರ ಪ್ರಕಾರ, ಆರೋಪಿಗಳು ಸ್ವಂತ ಲಾಭಕ್ಕಾಗಿ ಗಾಂಜಾ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಕಾರ್ಯಾಚರಣೆ ವೇಳೆ KA-05 AQ 2038 ನೋಂದಣಿ ಸಂಖ್ಯೆಯ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಸುಮಾರು ₹5,38,250 ಮೌಲ್ಯದ 10 ಕೆಜಿ 765 ಗ್ರಾಂ ಒಣಗಿದ ಗಾಂಜಾ ಪತ್ತೆಯಾಗಿದೆ.

ಬಂಧಿತರ ವಿವರ

ಪೊಲೀಸ್ ಪ್ರಕಟಣೆಯ ಪ್ರಕಾರ ಬಂಧಿತರನ್ನು ಹಾವೇರಿ ನಾಗೇಂದ್ರನಮಟ್ಟಿ ನಿವಾಸಿ ಸಾಹೀಲ ಅಹ್ಮದ ತಂದೆ ಸಲೀಂ ಅಹ್ಮದ ಕರ್ಜಗಿ (20), ಲಕ್ಷ್ಮೇಶ್ವರ ಜಿ : ಗದಗ ನಿವಾಸಿ, ಸೋಹೆಲ್ ತಂದೆ ನೂರಅಹ್ಮದ ಕುಡಚಿ (20), ಹಾವೇರಿ ನಾಗೇಂದ್ರನಮಟ್ಟಿ ನಿವಾಸಿ ಅಬ್ದುಲ್ ತಂದೆ ಅಕ್ಷರಸಾಬ ಹಾದಿಮನಿ (19), ಹಾವೇರಿ ನಡುವಿನಮಠ ದಡ್ಡಿ ನಿವಾಸಿ ಮಂಜುನಾಥ ತಂದೆ ಶಿವಬಸಪ್ಪ ಕಲಕೋಟಿ (18) ಹಾಗೂ ಹಾವೇರಿ ನಾಗೇಂದ್ರನಮಟ್ಟಿ ನಿವಾಸಿ ಸುದೀಪ ಕನಕಪ್ಪ (22) ಎಂದು ಗುರುತಿಸಲಾಗಿದೆ.

ಇವರೊಂದಿಗೆ ಒಬ್ಬ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಕೂಡ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

NDPS ಕಾಯ್ದೆಯಡಿ ಪ್ರಕರಣ

ಈ ಕುರಿತು ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 137/2026ರಂತೆ NDPS Act-1985ರ ಕಲಂ 20(b)(ii)(B) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಂಧಿತ ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪೊಲೀಸ್ ತಂಡದ ಕಾರ್ಯಾಚರಣೆ

ಈ ಕಾರ್ಯಾಚರಣೆಯನ್ನು ಹಾವೇರಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಯಶೋಧಾ ವಂಟಗೋಡಿ, ಐಪಿಎಸ್ ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಲ್.ವೈ. ಶಿರಕೋಳ ಹಾಗೂ ಹಾವೇರಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಗಿರಿಮಲ್ಲ ತಳಕಟ್ಟಿ ಅವರ ನೇತೃತ್ವದಲ್ಲಿ ನಡೆಸಲಾಗಿದೆ.

ಹಾವೇರಿ ಶಹರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮೋತಿಲಾಲ್ ಆರ್. ಪವಾರ್ ಅವರ ಮುಂದಾಳತ್ವದಲ್ಲಿ ಪಿಎಸ್‌ಐಗಳಾದ ಬಿ.ಜಿ. ದೊಡ್ಡಮನಿ, ಎನ್.ಎನ್. ಶಿಶುವಿನಹಾಳ ಹಾಗೂ ಪೊಲೀಸ್ ಸಿಬ್ಬಂದಿ ಮತ್ತು ತಾಂತ್ರಿಕ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

SOCO ಅಧಿಕಾರಿಗಳಾದ ಸೂರಜ್, ಸಿದ್ದರಾಮೇಶ ಹಾಗೂ ದಯಾನಂದ ಅವರು ಕೂಡ ಪತ್ತೆ ಕಾರ್ಯದಲ್ಲಿ ಶ್ರಮಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವನ್ನು ಮೇಲಾಧಿಕಾರಿಗಳು ಶ್ಲಾಘಿಸಿದ್ದು, ಬಹುಮಾನ ಘೋಷಿಸಿದ್ದಾರೆ.

Related Posts

ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

You cannot copy content of this page