ಹಾವೇರಿ ಜಿಲ್ಲೆಗೆ ಮತ್ತೊಂದು ಮಹತ್ವದ ಜವಾಬ್ದಾರಿ ಸಿಕ್ಕಿದೆ..!
ಶಿಗ್ಗಾಂವಿ ಶಾಸಕ ಯಾಸಿರ್ ಅಹಮದ್ ಖಾನ್ ಪಠಾಣ್ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಹೊಣೆಗಾರಿಕೆ ನೀಡಲಾಗಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿನ ಹಾಸ್ಟೆಲ್ಗಳ ವಿವಿಧ ಸೌಲಭ್ಯಗಳ ಪರಿಶೀಲನೆಗಾಗಿ ರಚಿಸಿರುವ ಸಮಿತಿಗೆ ಯಾಸಿರ್ ಪಠಾಣ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಹಾಗಾದ್ರೆ ಈ ಸಮಿತಿಯ ಜವಾಬ್ದಾರಿ ಏನು..? ಯಾಸಿರ್ ಪಠಾಣ್ ಅವರಿಗೆ ಸಿಕ್ಕಿರುವ ಈ ಹೊಸ ಹೊಣೆಗಾರಿಕೆ ಯಾವುದು..?
ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದ ಶಾಸಕ ಯಾಸಿರ್ ಅಹಮದ್ ಖಾನ್ ಪಠಾಣ್ ಅವರಿಗೆ ರಾಜ್ಯ ಮಟ್ಟದಲ್ಲಿ ಮತ್ತೊಂದು ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಹಾಸ್ಟೆಲ್ಗಳಲ್ಲಿ ಆಧಾರಭೂತ ಸೌಕರ್ಯಗಳು ಹಾಗೂ ವಿದ್ಯಾರ್ಥಿಗಳಿಗೆ ಲಭ್ಯವಾಗುತ್ತಿರುವ ವಿವಿಧ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಲು ಸಮಿತಿಯೊಂದನ್ನು ರಚಿಸಲಾಗಿದೆ. ಈ ಸಮಿತಿಗೆ ಶಿಗ್ಗಾಂವಿ ಶಾಸಕ ಯಾಸಿರ್ ಅಹಮದ್ ಖಾನ್ ಪಠಾಣ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಸೆಪ್ಟೆಂಬರ್ 24ರಂದು ಹೊರಡಿಸಿರುವ ಸರ್ಕಾರಿ ಆದೇಶದಲ್ಲಿ ಈ ನೇಮಕಾತಿ ಮಾಡಲಾಗಿದೆ. ಯಾಸಿರ್ ಪಠಾಣ್ ಅವರೊಂದಿಗೆ ಬಳ್ಳಾರಿಯ ಮೊಹಮ್ಮದ್ ರಫೀಕ್ ಜಿ.ಎಸ್., ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಸದಸ್ಯೆ ಮಂದೀಪ್ ಕೌರ್, ಜಮಖಂಡಿಯ ರಾಜೀವ್ ಗಾಂಧಿ ಫಿಶರೀಸ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ನಜೀರ್ ಅಹಮದ್ ಕಂಗನೊಳ್ಳಿ ಸೇರಿದಂತೆ ಹಲವು ಸದಸ್ಯರನ್ನು ನೇಮಕ ಮಾಡಲಾಗಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರನ್ನು ಸದಸ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಶಿಗ್ಗಾಂವಿ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿರುವ ಯಾಸಿರ್ ಪಠಾಣ್ ಅವರಿಗೆ ಈ ಬಾರಿ ರಾಜ್ಯ ಮಟ್ಟದ ಸಮಿತಿಯ ಅಧ್ಯಕ್ಷ ಸ್ಥಾನ ಸಿಕ್ಕಿರುವುದು ವಿಶೇಷ. ಹಾವೇರಿ ಜಿಲ್ಲೆಯಿಂದ ವಿಧಾನಸಭೆಗೆ ಆಯ್ಕೆಯಾದ ಶಾಸಕರೊಬ್ಬರಿಗೆ ರಾಜ್ಯಮಟ್ಟದ ಸಮಿತಿಯ ಅಧ್ಯಕ್ಷ ಸ್ಥಾನ ಸಿಕ್ಕಿರುವುದರಿಂದ, ಜಿಲ್ಲೆಯ ದೃಷ್ಟಿಯಿಂದಲೂ ಈ ನೇಮಕಾತಿ ಗಮನ ಸೆಳೆದಿದೆ. ಇನ್ನು ಅಧ್ಯಕ್ಷರಾಗಿ ಯಾಸಿರ್ ಪಠಾಣ್ ನೇತೃತ್ವದ ಸಮಿತಿ, ಸಂಬಂಧಿಸಿದ ಹಾಸ್ಟೆಲ್ಗಳಲ್ಲಿನ ಸೌಲಭ್ಯಗಳು ಮತ್ತು ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಲಿದೆ.
ಶಿಗ್ಗಾಂವಿಯಿಂದ ವಿಧಾನಸಭೆಗೆ ಇದೀಗ ರಾಜ್ಯಮಟ್ಟದ ಸಮಿತಿಯ ಅಧ್ಯಕ್ಷ ಸ್ಥಾನ ಯಾಸಿರ್ ಪಠಾಣ್ ಅವರಿಗೆ ಸಿಕ್ಕಿರುವ ಈ ಹೊಸ ಜವಾಬ್ದಾರಿ, ಹಾವೇರಿ ಜಿಲ್ಲೆಯ ರಾಜಕೀಯ ವಲಯದಲ್ಲೂ ಗಮನ ಸೆಳೆದಿದೆ. ಅಧ್ಯಕ್ಷರಾಗಿ ಯಾಸಿರ್ ಪಠಾಣ್ ಅವರ ಮುಂದಿನ ಕಾರ್ಯವೈಖರಿ ಹೇಗಿರಲಿದೆ..? ಅವರ ನೇತೃತ್ವದ ಸಮಿತಿ ಯಾವೆಲ್ಲಾ ವಿಚಾರಗಳ ಬಗ್ಗೆ ಗಮನ ಹರಿಸಲಿದೆ..?ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.








