*ನಟ ನಾನಾ ಪಾಟೇಕರ್ ನಿಧನಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ*
ಬೆಂಗಳೂರು: ಖ್ಯಾತ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ದುಖವಾಯಿತು. ಹಿಂದಿ ಹಾಗೂ ಮರಾಠಿ ಚಿತ್ರರಂಗದಲ್ಲಿ ತಮ್ಮದೇಯಾದ ವಿಶಿಷ್ಟ ಶೈಲಿಯ ಡೈಲಾಗ್ ಗಳ ಮೂಲಕ ತಮ್ಮದೇ ಆದ ಛಾಪು ಮೂಡಿಸಿದ್ದರು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಎಕ್ಸ್ ಮಾಡಿರುವ ಅವರು, ನಾನಾ ಪಾಟೇಕರ್ ಅವರ ನಟನೆಯ ಕ್ರಾಂತಿವೀರ, ನಟ ಸಾಮ್ರಾಟ ಚಿತ್ರಗಳು ಸದಾ ಜನಮಾನಸದಲ್ಲಿ ಉಳಿಯುವಂತೆ ಮಾಡಿದ್ದಾರೆ.
ನಾನಾ ಪಾಟೇಕರ್ ಕೇವಲ ನಟರಾಗಿರದೇ ತಮ್ಮ ನಾಮ್ ಫೌಂಡೇಷನ್ ಮೂಲಕ ರೈತರು ಹಾಗೂ ನೊಂದವರ ಸೇವೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ
ಅವರ ಅಗಲಿಕೆಯಿಂದ ಭಾರತೀಯ ಚಿತ್ರರಂಗ ಒಬ್ಬ ಸಂವೇದನಾಶೀಲ ನಟನನ್ನು ಕಳೆದುಕೊಂಡು ಬಡವಾದಂತಾಗಿದೆ. ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ಹಾಗೂ ಅವರ ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪದಲ್ಲಿ ತಿಳಿಸಿದ್ದಾರೆ.





