ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ: ಹತ್ತಿಮತ್ತೂರಿನಲ್ಲಿ ಸಚಿವ ರುದ್ರಪ್ಪ ಲಮಾಣಿ ನೇತೃತ್ವದಲ್ಲಿ ಸಭೆ
ಹಾವೇರಿ: ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ಹತ್ತಿಮತ್ತೂರು ಹೋಬಳಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಅವರ ನೇತೃತ್ವದಲ್ಲಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಮುಂಬರುವ ಚುನಾವಣೆಯ ಸಿದ್ಧತೆಗಳು ಹಾಗೂ ಮುಂದಿನ ಕಾರ್ಯತಂತ್ರಗಳ ಕುರಿತು ಪಕ್ಷದ ಮುಖಂಡರು ಮತ್ತು ಪದವೀಧರ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಪದವೀಧರರ ಸಮಸ್ಯೆಗಳು, ಅವರ ಆಶಯಗಳು ಹಾಗೂ ಚುನಾವಣಾ ಪ್ರಕ್ರಿಯೆಯಲ್ಲಿ ಕಾರ್ಯಕರ್ತರ ಪಾತ್ರದ ಕುರಿತು ವಿಚಾರ ವಿನಿಮಯ ನಡೆಯಿತು. ಅಲ್ಲದೆ, ಚುನಾವಣೆಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಮುಖಂಡರು ಮತ್ತು ಕಾರ್ಯಕರ್ತರ ಅಭಿಪ್ರಾಯಗಳನ್ನು ಆಲಿಸಲಾಯಿತು.
ಮುಂಬರುವ ದಿನಗಳಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಕಾರ್ಯಚಟುವಟಿಕೆಗಳು, ಪಕ್ಷದ ಸಂಘಟನೆ ಹಾಗೂ ಕಾರ್ಯಕರ್ತರ ಜವಾಬ್ದಾರಿಗಳ ಕುರಿತು ಸಮಾಲೋಚನೆ ನಡೆಸಲಾಯಿತು.
ಸಭೆಯಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದ ಮುಖಂಡ ಆನಂದಸ್ವಾಮಿ ಗಡ್ಡದೇವರಮಠ, ಹಿರಿಯ ಮುಖಂಡರು, ಕಾರ್ಯಕರ್ತರು, ಪದವೀಧರ ಮಿತ್ರರು ಹಾಗೂ ಆತ್ಮೀಯರು ಉಪಸ್ಥಿತರಿದ್ದರು.







