6

ಕಬ್ಬೂರು ಜಿ.ಪಂ. ಕ್ಷೇತ್ರದಲ್ಲಿ ಟಿಕೆಟ್ ಫೈಟ್?

ಕಬ್ಬೂರು ಜಿ.ಪಂ. ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತು ಸ್ಪಷ್ಟನೆ

ಕಬ್ಬೂರು ಜಿ.ಪಂ. ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಮಂಜುನಾಥ ನೀಲಗುಂದ ಅವರಿಗೆ ಯಾವುದೇ ಭರವಸೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ ನಾಯಕ.
ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಫೋಟೋ ಬಳಸಿ ಪೋಸ್ಟ್ ಮಾಡುವುದನ್ನು ಮುಂದುವರಿಸಿದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ಬ್ಯಾಡಗಿ ಶಾಸಕ ಬಸವರಾಜ್ ಶಿವಣ್ಣನವರ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದ್ದ ವಿಷಯ ಈ ರೀತಿಯಾಗಿತ್ತು.

ಇತ್ತೀಚೆಗೆ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕಟಣೆಯಾದ ನಂತರ, ನನ್ನ ಮತಕ್ಷೇತ್ರದ ವ್ಯಾಪ್ತಿಗೆ ಬರುವ ಹಾವೇರಿ ತಾಲೂಕಿನ ಕಬ್ಬೂರು ಜಿಲ್ಲಾ ಪಂಚಾಯಿತಿ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿಯ ಬಗ್ಗೆ ಕಬ್ಬೂರ ಜಿಲ್ಲಾ ಪಂಚಾಯತ ಕ್ಷೇತ್ರದ ಮತದಾರರಿಗೆ ಮತ್ತು ಪಕ್ಷದ ಮುಖಂಡರುಗಳಿಗೆ ತಿಳಿಸಿವುದೇನಂದರೆ……
ಮಂಜುನಾಥ ನೀಲಗುಂದ ಅವರು ನಮ್ಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ತಾಲೂಕಿನವರು ಅಲ್ಲ ಮತ್ತು ನಮ್ಮ ಜಿಲ್ಲೆಯವರು ಅಲ್ಲ, ಬೇರೆ ಜಿಲ್ಲೆಯವರಾಗಿದ್ದು, ಕಬ್ಬೂರ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಪ್ರಬಲ ಅಭ್ಯರ್ಥಿ ಎಂದು ತಮ್ಮನ್ನು ತಾವು ಬಿಂಬಿಸಿಕೊಳ್ಳುತ್ತಾ, ನನ್ನ ಭಾವಚಿತ್ರವನ್ನು ಬಳಸಿಕೊಂಡು ವಾಟ್ಸಾಪ್, ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಂ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದರಿಂದ ಕಬ್ಬೂರು ಕ್ಷೇತ್ರದ ಸಾರ್ವಜನಿಕರಲ್ಲಿ ಗೊಂದಲ ಉಂಟಾಗುತ್ತಿದೆ.
ಈ ಕುರಿತು ಸ್ಪಷ್ಟಪಡಿಸುವುದೇನೆಂದರೆ, ಕಬ್ಬೂರ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಚುನಾವಣೆಗೆ ಮಂಜುನಾಥ ನೀಲಗುಂದ ಇವರಿಗೆ ಪಕ್ಷದ ಟಿಕೆಟ್ ನೀಡುವ ಬಗ್ಗೆ , ನಾನಾಗಲಿ ಅಥವಾ ಪಕ್ಷದ ಹೈಕಮಾಂಡ್ ಆಗಲಿ ಯಾವುದೇ ರೀತಿಯ ಅಧಿಕೃತ ಭರವಸೆ, ಬೆಂಬಲ ಅಥವಾ ಪ್ರೋತ್ಸಾಹ ನೀಡಿರುವುದಿಲ್ಲ. ಆದಾಗ್ಯೂ, ಪಕ್ಷದ ಟಿಕೆಟ್ ತಮಗೇ ದೊರೆಯಲಿದೆ ಎಂಬ ರೀತಿಯಲ್ಲಿ ಬಿಂಬಿಸಿಕೊಳ್ಳುವ ಮೂಲಕ ಮತದಾರರಲ್ಲಿ ತಪ್ಪು ಅಭಿಪ್ರಾಯ ಮೂಡಿಸುವ ಪ್ರಯತ್ನ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿರುತ್ತದೆ.
ಇದೇ ರೀತಿ ಪದೇ ಪದೆ ನನ್ನ ಭಾವಚಿತ್ರವನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವುದು ಮುಂದುವರೆದಲ್ಲಿ ಕಾನೂನಿನ ಮೊರೆ ಹೋಗಬೇಕಾಗುತ್ತದೆ.
ನಮ್ಮ ಪಕ್ಷದಲ್ಲಿ ಸುಮಾರು 30 ರಿಂದ 40 ವರ್ಷಗಳಿಂದ ಪಕ್ಷದ ತತ್ವ, ಸಿದ್ಧಾಂತ ಹಾಗೂ ಸಂಘಟನೆಯ ಬಲವರ್ಧನೆಗಾಗಿ ಸಕ್ರಿಯವಾಗಿ ಶ್ರಮಿಸುತ್ತಾ ಬಂದಿರುವ ಅನೇಕ ಹಿರಿಯ ಹಾಗೂ ಅನುಭವಿ ಮುಖಂಡರಿದ್ದಾರೆ. ಅಂತಹ ಮುಖಂಡರ ಪಕ್ಷನಿಷ್ಠೆ, ಸೇವೆ ಹಾಗೂ ಸಂಘಟನೆಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ, ಪಕ್ಷದ ವರಿಷ್ಠರು ಸೂಕ್ತ ಅಭ್ಯರ್ಥಿಯನ್ನು ಗುರುತಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.


ಆದ್ದರಿಂದ, ಕಬ್ಬೂರ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಊಹಾಪೋಹಗಳಿಗೆ ಹಾಗೂ ಅಧಿಕೃತವಲ್ಲದ ಮಾಹಿತಿಗಳಿಗೆ ಮತದಾರರು ಕಿವಿಗೊಡಬಾರದೆಂದು ಮನವಿ ಮಾಡಿಕೊಳ್ಳುತ್ತೇನೆ.
ಪಕ್ಷದ ಅಧಿಕೃತ ನಿರ್ಧಾರ ಪ್ರಕಟವಾಗುವವರೆಗೆ ಎಲ್ಲರೂ ಸಂಯಮದಿಂದಿದ್ದು, ಪಕ್ಷದ ವರಿಷ್ಠರು ಕೈಗೊಳ್ಳುವ ಅಂತಿಮ ನಿರ್ಧಾರಕ್ಕೆ ನಾವು-ನಿವೇಲ್ಲರೂ ಬದ್ಧರಾಗಿರೋಣ. ಪಕ್ಷದ ಶಿಸ್ತು, ಒಗ್ಗಟ್ಟು ಹಾಗೂ ಸಂಘಟನೆಯ ಗೌರವವನ್ನು ಕಾಪಾಡಲು ಎಲ್ಲರೂ ಸಹಕರಿಸಬೇಕು……
ಬಸವರಾಜ ನೀ ಶಿವಣ್ಣನವರ
ಶಾಸಕರು ಬ್ಯಾಡಗಿ

  • Related Posts

    25 ಕೋಟಿ ಜನರನ್ನು ಬಡತನದಿಂದ ಹೊರತಂದ ಮೋದಿ! ಬೊಮ್ಮಾಯಿ

    Share this… Facebook Pinterest Twitter Linkedin Whatsappಇಂದು ಹಾವೇರಿ ಜಿಲ್ಲೆಯ ಬ್ಯಾಡಗಿ ನಗರದ ಶ್ರೀ ಸಿದ್ದೇಶ್ವರ ಸಭಾಭವನದಲ್ಲಿ ಭಾರತೀಯ ಜನತಾ ಪಾರ್ಟಿಯ ಪಶ್ಚಿಮ ಪದವೀಧರ ಮತಕ್ಷೇತ್ರದ ಅಭ್ಯರ್ಥಿಯಾದ ಎಸ್.ವಿ.ಸಂಕನೂರ ಪರ ಮತಯಾಚನೆಯನ್ನು ಮಾಡಿ, ಅರಾಜಕತೆ ಸೃಷ್ಟಿ ಕಬ್ಬಿನ ದರ ಕಾರ್ಖಾನೆಗಳು…

    ದೆಹಲಿ ಜಂತರ್ ಮಂತರ್‌ನಲ್ಲಿ ಹಾವೇರಿ ಕಾಂಗ್ರೆಸ್ ಶಾಸಕರು

    Share this… Facebook Pinterest Twitter Linkedin Whatsappದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ರಾಹುಲ್ ಗಾಂಧಿ ನೇತೃತ್ವದ ಹೋರಾಟದಲ್ಲಿ ಹಾವೇರಿ ಜಿಲ್ಲೆಯ ಶಾಸಕರು ಹಾವೇರಿ: ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ವಿರುದ್ಧದ ಆರೋಪಗಳು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ…

    You cannot copy content of this page