6

ಯತ್ನಾಳ್–ಈಶ್ವರಪ್ಪ ವಾಪ್ಸಿ ಬಗ್ಗೆ ಬೊಮ್ಮಾಯಿ ಮಹತ್ವದ ಸುಳಿವು

ಬಿಜೆಪಿಯಲ್ಲಿ ಘರ್ ವಾಪ್ಸಿ ಚರ್ಚೆಗೆ ಬೊಮ್ಮಾಯಿ ಸುಳಿವು; ಶೀಘ್ರದಲ್ಲೇ ಒಳ್ಳೆಯ ಬೆಳವಣಿಗೆ ಎಂದ ಮಾಜಿ ಸಿಎಂ

ಹಾವೇರಿ: ಬಿಜೆಪಿಯಲ್ಲಿ ಮತ್ತೆ ಒಗ್ಗಟ್ಟಿನ ಪ್ರಯತ್ನಗಳು ನಡೆಯುತ್ತಿವೆಯೇ ಎಂಬ ಚರ್ಚೆಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ಮತ್ತಷ್ಟು ಮಹತ್ವ ತಂದಿದೆ. ವಿಜಯಪುರದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಬಿಜೆಪಿ ವಾಪಸಾತಿ ವಿಚಾರವಾಗಿ ಶಿಗ್ಗಾವಿಯಲ್ಲಿ ಬೊಮ್ಮಾಯಿ ಮಹತ್ವದ ಸುಳಿವು ನೀಡಿದ್ದಾರೆ.

ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ, ರಾಜಕಾರಣ ನಿಂತ ನೀರಲ್ಲ. ಚುನಾವಣೆಗೆ ಇನ್ನೂ ಒಂದೂವರೆ ವರ್ಷವಿದೆ ಎಂದು ಹೇಳಿದ್ದಾರೆ.

ಜನರ ಬಳಿಗೆ ಹೋದಾಗ ಈ ಸರ್ಕಾರವನ್ನು ಕಿತ್ತೊಗೆಯಬೇಕು ಎಂಬ ಭಾವನೆ ವ್ಯಕ್ತವಾಗುತ್ತಿದೆ. ಅದಕ್ಕಾಗಿ ಬಿಜೆಪಿಯವರೆಲ್ಲ ಒಂದಾಗಬೇಕು ಎಂಬುದು ಜನರ ಅಭಿಪ್ರಾಯವಾಗಿದೆ. ಜನಸಾಮಾನ್ಯರು ಮತ್ತು ಕಾರ್ಯಕರ್ತರಲ್ಲಿಯೂ ಒಗ್ಗಟ್ಟಿನ ಭಾವನೆ ಇದೆ. ಜನರ ಒತ್ತಡಕ್ಕೆ ಹೊಂದಿಕೊಳ್ಳಬೇಕು ಎಂಬ ಭಾವನೆ ನಮ್ಮಲ್ಲೂ ಮೂಡಿದೆ ಎಂದು ತಿಳಿಸಿದ್ದಾರೆ.

ಬಿಜೆಪಿಯಲ್ಲಿನ ಈ ಬೆಳವಣಿಗೆ ಒಳ್ಳೆಯ ಬೆಳವಣಿಗೆಯಾಗಿದ್ದು, ಶೀಘ್ರದಲ್ಲೇ ಖಂಡಿತವಾಗಿಯೂ ಒಳ್ಳೆಯ ಬೆಳವಣಿಗೆ ಆಗಲಿದೆ ಎಂದು ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹೈಕಮಾಂಡ್ ಮಟ್ಟದಲ್ಲಿ ಸಹಮತಕ್ಕೆ ಪ್ರಯತ್ನ

ಬಿಜೆಪಿಯಲ್ಲಿನ ಒಗ್ಗಟ್ಟಿನ ವಿಚಾರವನ್ನು ಹೈಕಮಾಂಡ್ ಅಂಗಳಕ್ಕೆ ಕೊಂಡೊಯ್ಯುವುದು ನಮ್ಮ ಕರ್ತವ್ಯವಾಗಿದೆ. ಹೈಕಮಾಂಡ್ ಮಟ್ಟದಲ್ಲಿ ಸಹಮತ ಮೂಡಿಸಲು ನಾವು ಕೆಲಸ ಮಾಡುತ್ತೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಇಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಬಿಜೆಪಿ ನಾಯಕ ಆರ್. ಅಶೋಕ್ ಭೇಟಿ ಮಾಡುವ ಸಾಧ್ಯತೆಯಿದ್ದು, ಈ ಸಂದರ್ಭದಲ್ಲಿ ಪಕ್ಷದ ಒಗ್ಗಟ್ಟು ಹಾಗೂ ನಾಯಕರ ವಾಪಸಾತಿ ವಿಚಾರ ಚರ್ಚೆಯಾಗುವ ಸಾಧ್ಯತೆಯಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಇದು ಕೇವಲ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಹಲವು ಸುತ್ತಿನ ಚರ್ಚೆಗಳು ನಡೆಯಲಿವೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಒಟ್ಟಿನಲ್ಲಿ, ಯತ್ನಾಳ್ ಮತ್ತು ಈಶ್ವರಪ್ಪ ಅವರ ಬಿಜೆಪಿ ವಾಪಸಾತಿ ವಿಚಾರದಲ್ಲಿ ಪಕ್ಷದೊಳಗಿನ ಚರ್ಚೆಗಳು ಯಾವ ದಿಕ್ಕಿನಲ್ಲಿ ಸಾಗಲಿವೆ ಹಾಗೂ ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ. ಆದರೆ,

Related Posts

ಹಾವೇರಿ ಜಿಲ್ಲೆಯಲ್ಲಿ ಶೇ.78.71ರಷ್ಟು ಮತದಾನ

Share this… Facebook Pinterest Twitter Linkedin Whatsappಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ: ಹಾವೇರಿ ಜಿಲ್ಲೆಯಲ್ಲಿ ಶೇ.78.71ರಷ್ಟು ಮತದಾನ ಹಾವೇರಿ: ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆಯ ಮತದಾನ ಪ್ರಕ್ರಿಯೆ ಜಿಲ್ಲೆಯಲ್ಲಿ ಶಾಂತಿಯುತವಾಗಿ ನಡೆದಿದ್ದು, ಶೇ.78.71ರಷ್ಟು ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ…

ಹಾವೇರಿ ಜಿಲ್ಲೆಯ ರೈತರಿಗೆ ಸಿಹಿಸುದ್ದಿ!

Share this… Facebook Pinterest Twitter Linkedin Whatsappಶ್ರೇಷ್ಠ ತೋಟಗಾರಿಕೆ ರೈತ – ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ ಹಾವೇರಿ: ಅ.22 : ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2026-27ನೇ ಸಾಲಿನ ‘ತೋಟಗಾರಿಕಾ ಮೇಳ’ವನ್ನು ಡಿಸೆಂಬರ್ 23 ರಿಂದ 25…

You cannot copy content of this page