6

ಹೊಲದಲ್ಲಿ ಕೆಲಸ ಮಾಡುವಾಗ ವಿದ್ಯುತ್ ಸ್ಪರ್ಶ: ರೈತ ಸಾವು

ಹಾವೇರಿ: ವಿದ್ಯುತ್ ಸ್ಪರ್ಶಿಸಿ ರೈತ ಸಾವು; ಸ್ಥಳಕ್ಕೆ ಶಾಸಕ ಯು.ಬಿ. ಬಣಕಾರ ಭೇಟಿ

ಹಾವೇರಿ: ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮಳಗಿ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ 62 ವರ್ಷದ ರೈತರೊಬ್ಬರು ಮೃತಪಟ್ಟಿದ್ದಾರೆ.

ಮಳಗಿ ಗ್ರಾಮದ ನಿವಾಸಿ ಈರಪ್ಪ ರುದ್ರಪ್ಪ ಮೇದೂರು (62) ಮೃತಪಟ್ಟ ದುರ್ದೈವಿ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಅವರು ಸಾವನ್ನಪ್ಪಿದ್ದಾರೆ.

ಘಟನೆ ತಿಳಿಯುತ್ತಿದ್ದಂತೆ ಹಿರೇಕೆರೂರು ಶಾಸಕ ಯು.ಬಿ. ಬಣಕಾರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತ ರೈತನ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.ಈ ಘಟನೆ ರಟ್ಟಿಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Related Posts

ಬ್ಯಾಲೆಟ್ ಹೊಡೆತ ಬುಲೆಟ್‌ಗಿಂತ ಜೋರು! bc patil

Share this… Facebook Pinterest Twitter Linkedin Whatsappವಿಧಾನಪರಿಷತ್ ಚುನಾವಣೆಯಲ್ಲಿ 4ಕ್ಕೆ 4 ಗೆಲುವು: ಕಾಂಗ್ರೆಸ್‌ಗೆ ಮಾಜಿ ಸಚಿವ ಬಿ.ಸಿ. ಪಾಟೀಲ್ ತಿರುಗೇಟು! ಹಾವೇರಿ: ವಿಧಾನಪರಿಷತ್ ಚುನಾವಣೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲೂ ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದು ಉಲ್ಲೇಖಿಸಿ, ಮಾಜಿ…

ಹಾವೇರಿ ಜಿಲ್ಲೆಯಲ್ಲಿ ಶೇ.78.71ರಷ್ಟು ಮತದಾನ

Share this… Facebook Pinterest Twitter Linkedin Whatsappಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ: ಹಾವೇರಿ ಜಿಲ್ಲೆಯಲ್ಲಿ ಶೇ.78.71ರಷ್ಟು ಮತದಾನ ಹಾವೇರಿ: ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆಯ ಮತದಾನ ಪ್ರಕ್ರಿಯೆ ಜಿಲ್ಲೆಯಲ್ಲಿ ಶಾಂತಿಯುತವಾಗಿ ನಡೆದಿದ್ದು, ಶೇ.78.71ರಷ್ಟು ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ…

You cannot copy content of this page