ಎಸ್.ವಿ. ಸಂಕನೂರ ಗೆಲುವು: ಹಾವೇರಿಯಲ್ಲಿ ಬಿಜೆಪಿ ನಾಯಕರಿಂದ ಸಿಹಿ ಹಂಚಿ ಸಂಭ್ರಮ
ಹಾವೇರಿ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಎಸ್.ವಿ. ಸಂಕನೂರ ಅವರು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಬಿಜೆಪಿ ಮುಖಂಡರು ಸಿಹಿ ಹಂಚಿ ಸಂಭ್ರಮಿಸಿದರು.
ಇಂದು ಹಾವೇರಿಯ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಸಂಭ್ರಮಾಚರಣೆ ನಡೆಯಿತು.

ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ.ಸಿ. ಪಾಟೀಲ, ಮಾಜಿ ಶಾಸಕ ಅರುಣಕುಮಾರ ಪೂಜಾರ, ಮುಖಂಡರಾದ ಭರತ ಬೊಮ್ಮಾಯಿ, ಗವಿಸಿದ್ದಪ್ಪ ದ್ಯಾಮಣ್ಣವರ ಸೇರಿದಂತೆ ಬಿಜೆಪಿ ಪಕ್ಷದ ಪ್ರಮುಖರು ಹಾಗೂ ಮುಖಂಡರು ಉಪಸ್ಥಿತರಿದ್ದರು.
ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಹಾಗೂ ಮುಖಂಡರು ಸಿಹಿ ಹಂಚುವ ಮೂಲಕ ಸಂತಸ ವ್ಯಕ್ತಪಡಿಸಿದರು.







