ಹಾನಗಲ್ನಲ್ಲಿ ಗಾಂಜಾ ಮಾರಾಟ ಆರೋಪಿಯ ಬಂಧನ; ಹಸಿ ಗಾಂಜಾ, ದ್ವಿಚಕ್ರ ವಾಹನ ವಶಕ್ಕೆ
ಹಾವೇರಿ: ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಪಾಳಾ ಕ್ರಾಸ್ ಬಳಿ ನಿಷೇಧಿತ ಗಾಂಜಾ ಸೊಪ್ಪನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯಿಂದ ಹಸಿ ಗಾಂಜಾ ಸೊಪ್ಪು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.
ಶ್ರೀ ಕರ್ನಾಟಕ | ಹಾವೇರಿ ಸುದ್ದಿ






