6

ಹಾವೇರಿ: ವಿಕಲಚೇತನರಿಗೆ ಆನ್‌ಲೈನ್ ಅರ್ಜಿ ಆಹ್ವಾನ

ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಹಾವೇರಿ: ಅ.29 – ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 2026–27ನೇ ಸಾಲಿನ ವಿವಿಧ ಫಲಾನುಭವಿಗಳ ಆಧಾರಿತ ಯೋಜನೆಗಳ ಸೌಲಭ್ಯ ಪಡೆಯಲು ವಿಕಲಚೇತನರು ಆನ್‌ಲೈನ್ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ.

ಆಧಾರ ಯೋಜನೆ, ಸಾಧನ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ನಿರುದ್ಯೋಗ ಭತ್ಯೆ ಯೋಜನೆ, ಶಿಶುಪಾಲನಾ ಭತ್ಯೆ ಯೋಜನೆ, ಮರಣ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ ಕಿಟ್, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ, ಶ್ರವಣದೋಷವುಳ್ಳವರಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ, ಸಾಧನ ಸಲಕರಣೆ ಹಾಗೂ ಬ್ಯಾಟರಿ ಚಾಲಿತ ವೀಲ್‌ಚೇರ್ ಸೌಲಭ್ಯಕ್ಕೆ ಅರ್ಹ ವಿಕಲಚೇತನರು https://sevaone.karnataka.gov.in/ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ದಿನಾಂಕ 15-11-2026ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಆನ್‌ಲೈನ್‌ನಲ್ಲಿ ಭರ್ತಿ ಮಾಡಿದ ಅರ್ಜಿಯ ಹಾರ್ಡ್ ಪ್ರತಿ­ಯನ್ನು ಆಯಾ ತಾಲೂಕುಗಳ ಎಂ.ಆರ್.ಡಬ್ಲ್ಯೂಗಳಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ 4, ನೆಲಮಹಡಿ, ದೇವಗಿರಿ-ಹಾವೇರಿ (ದೂ. 08375-249014) ಈ ವಿಳಾಸದಲ್ಲಿ ಸಂಪರ್ಕಿಸಬೇಕೆಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Posts

ಹಾವೇರಿ ಮುನ್ಸಿಪಲ್ ಶಾಲಾ 12 ವಿದ್ಯಾರ್ಥಿಗಳು, ರಾಜ್ಯಮಟ್ಟಕ್ಕೆ ಆಯ್ಕೆ

Share this… Facebook Pinterest Twitter Linkedin Whatsappಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮುನ್ಸಿಪಲ್ ಪ್ರೌಢಶಾಲೆ ವಿದ್ಯಾರ್ಥಿಗಳ ಸಾಧನೆ: 12 ಕ್ರೀಡಾಪಟುಗಳು ರಾಜ್ಯಮಟ್ಟಕ್ಕೆ ಆಯ್ಕೆ ಹಾವೇರಿ: ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಅಂಡರ್‌-17 ಕ್ರೀಡಾಕೂಟದಲ್ಲಿ ಹಾವೇರಿಯ ಮುನ್ಸಿಪಲ್ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿವಿಧ…

ಕಾಂಗ್ರೆಸ್ ತೊರೆದು ಕಮಲ ಹಿಡಿದ ಹಳ್ಳೂರಿನ ಮುಖಂಡರು

Share this… Facebook Pinterest Twitter Linkedin Whatsappಹಳ್ಳೂರಿನಲ್ಲಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ಮುಖಂಡರು; ಚುನಾವಣೆಗೆ ಮುನ್ನವೇ ರಾಜಕೀಯ ಚಟುವಟಿಕೆ ಚುರುಕು ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ಹಾಗೂ ತಾಲೂಕಿನ ಅಭಿವೃದ್ಧಿ ಕಾರ್ಯಗಳ ಕುರಿತು ಅಸಮಾಧಾನ ವ್ಯಕ್ತಪಡಿಸಿ,…

You cannot copy content of this page