6

ಹಾವೇರಿ ಮುನ್ಸಿಪಲ್ ಶಾಲಾ 12 ವಿದ್ಯಾರ್ಥಿಗಳು, ರಾಜ್ಯಮಟ್ಟಕ್ಕೆ ಆಯ್ಕೆ

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮುನ್ಸಿಪಲ್ ಪ್ರೌಢಶಾಲೆ ವಿದ್ಯಾರ್ಥಿಗಳ ಸಾಧನೆ: 12 ಕ್ರೀಡಾಪಟುಗಳು ರಾಜ್ಯಮಟ್ಟಕ್ಕೆ ಆಯ್ಕೆ

ಹಾವೇರಿ: ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಅಂಡರ್‌-17 ಕ್ರೀಡಾಕೂಟದಲ್ಲಿ ಹಾವೇರಿಯ ಮುನ್ಸಿಪಲ್ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿವಿಧ ಅಥ್ಲೆಟಿಕ್ಸ್ ಸ್ಪರ್ಧೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಶಾಲೆಯ ಒಟ್ಟು 12 ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದು, ನವೆಂಬರ್ 1ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಬಾಲಕಿಯರ ವಿಭಾಗದಲ್ಲಿ ವೈದೇವಿ ಕೊಡಗ ಮೂರು ಪ್ರಥಮ ಬಹುಮಾನ

9ನೇ ತರಗತಿಯ ವಿದ್ಯಾರ್ಥಿನಿ ವೈದೇವಿ ಕೊಡಗ 100 ಮೀಟರ್ ಓಟ, 200 ಮೀಟರ್ ಓಟ ಹಾಗೂ 400 ಮೀಟರ್ ಅಡೆತಡೆ ಓಟದಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟದಲ್ಲಿ ಮೂರು ಪ್ರಥಮ ಬಹುಮಾನಗಳನ್ನು ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

ಬಾಲಕರ ವಿಭಾಗದಲ್ಲೂ ವಿದ್ಯಾರ್ಥಿಗಳ ಮಿಂಚಿನ ಓಟ

10ನೇ ತರಗತಿಯ ಪೃಥ್ವಿ ಕುಮಾರ್ ಎಂ. ಅವರು 100 ಮೀಟರ್ ಓಟದಲ್ಲಿ ತೃತೀಯ, 200 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದು, 4×100 ಮೀಟರ್ ರಿಲೇ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡದ ಸದಸ್ಯರಾಗಿದ್ದಾರೆ.

10ನೇ ತರಗತಿಯ ವಿಶ್ವಜಿತ್ ಮಾಳಿ ಅವರು 400 ಮೀಟರ್ ಹಾಗೂ 800 ಮೀಟರ್ ಓಟಗಳಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಅಲ್ಲದೆ, 4×100 ಮೀಟರ್ ಮತ್ತು 4×400 ಮೀಟರ್ ರಿಲೇ ಸ್ಪರ್ಧೆಗಳಲ್ಲಿಯೂ ಪ್ರಥಮ ಸ್ಥಾನ ಪಡೆದ ತಂಡಗಳಲ್ಲಿ ಭಾಗವಹಿಸಿದ್ದಾರೆ.

9ನೇ ತರಗತಿಯ ಮಹಾಲಿಂಗ ಪಿಸೋತ್ರೆ ಅವರು 800 ಮೀಟರ್ ಓಟದಲ್ಲಿ ದ್ವಿತೀಯ ಹಾಗೂ 1500 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. 4×400 ಮೀಟರ್ ರಿಲೇ ಸ್ಪರ್ಧೆಯಲ್ಲಿಯೂ ಪ್ರಥಮ ಸ್ಥಾನ ಗಳಿಸಿದ ತಂಡದ ಸದಸ್ಯರಾಗಿದ್ದಾರೆ.

10ನೇ ತರಗತಿಯ ಪ್ರದೀಪ್ ತಂಗೋಡಿ ಅವರು 1500 ಮೀಟರ್ ಓಟದಲ್ಲಿ ದ್ವಿತೀಯ ಹಾಗೂ 3000 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. 4×400 ಮೀಟರ್ ರಿಲೇಯಲ್ಲಿಯೂ ಪ್ರಥಮ ಸ್ಥಾನ ಗಳಿಸಿದ್ದಾರೆ.

10ನೇ ತರಗತಿಯ ವಿಕಾಸ್ ಜಂಗವಾಡ ಅವರು 400 ಮೀಟರ್ ಅಡೆತಡೆ ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದು, 4×400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡದ ಸದಸ್ಯರಾಗಿದ್ದಾರೆ.

9ನೇ ತರಗತಿಯ ಸಮರ್ಥ್ ಕಂಬಳಿ ಅವರು 400 ಮೀಟರ್ ಅಡೆತಡೆ ಓಟದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಅಬ್ದುಲ್ ಮುಜಾಹಿದ್ ಸನ್ನಿ ಅವರು 400 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

9ನೇ ತರಗತಿಯ ಪ್ರಮೋದ್ ಕಬ್ಬೂರ್ ಹಾಗೂ 10ನೇ ತರಗತಿಯ ಪೃಥ್ವಿ ವಡ್ಡರ್ ಅವರು 4×100 ಮೀಟರ್ ರಿಲೇ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ತಂಡದ ಸದಸ್ಯರಾಗಿದ್ದಾರೆ.

ರಾಜ್ಯಮಟ್ಟದ ಸ್ಪರ್ಧೆಗೆ ಶುಭಾಶಯ

ವಿದ್ಯಾರ್ಥಿಗಳ ಈ ಸಾಧನೆಯು ಶಾಲೆ, ಹಾವೇರಿ ನಗರಸಭೆ ಹಾಗೂ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಗೆ ಗೌರವ ತಂದಿದೆ. ರಾಜ್ಯಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಮತ್ತಷ್ಟು ಸಾಧನೆ ಮಾಡಲಿ ಎಂದು ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ಶುಭ ಹಾರೈಸಿದ್ದಾರೆ.

ಈ ಸಂದರ್ಭದಲ್ಲಿ ಹಾವೇರಿ ನಗರಸಭೆಯ ಪೌರಾಯುಕ್ತರಾದ ಕಾಂತರಾಜ್ ಎಚ್. ಹಾಗೂ ಕಾರ್ಯಾಲಯದ ಸಿಬ್ಬಂದಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಯಶಸ್ಸು ಸಾಧಿಸುವಂತೆ ಶುಭ ಹಾರೈಸಿದರು.

ಮುನ್ಸಿಪಲ್ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಗಿರೀಶ್ ಎಂ. ಯತ್ತಿನಹಳ್ಳಿ ಅವರು ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಮಾರ್ಗದರ್ಶನ ನೀಡಿದ್ದಾರೆ.

ಶ್ರೀ ಕರ್ನಾಟಕ | ಹಾವೇರಿ ಸುದ್ದಿ

  • Related Posts

    ಹಾವೇರಿ: ವಿಕಲಚೇತನರಿಗೆ ಆನ್‌ಲೈನ್ ಅರ್ಜಿ ಆಹ್ವಾನ

    Share this… Facebook Pinterest Twitter Linkedin Whatsappವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ ಹಾವೇರಿ: ಅ.29 – ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 2026–27ನೇ ಸಾಲಿನ ವಿವಿಧ ಫಲಾನುಭವಿಗಳ ಆಧಾರಿತ ಯೋಜನೆಗಳ ಸೌಲಭ್ಯ ಪಡೆಯಲು…

    ನ.3ರಂದು ಹಾವೇರಿಯಲ್ಲಿ ವಿಕಲಚೇತನರ ಸಭೆ

    Share this… Facebook Pinterest Twitter Linkedin Whatsappವಿಕಲಚೇತನರ ಕುಂದುಕೊರತೆ ಸಭೆ ಹಾವೇರಿ: ಅ.29 : ಪ್ರಸಕ್ತ ಸಾಲಿನ ವಿಕಲಚೇತನರ ಕುಂದುಕೊರತೆ ಸಭೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನ.3ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸಭೆಯಲ್ಲಿ ಜಿಲ್ಲಾ…

    You cannot copy content of this page