ಕಬ್ಬು ಬೆಲೆ ನಿರ್ಧಾರಕ್ಕೆ ನ.12ರಂದು ಹಾವೇರಿಗೆ ರೈತ ಸಂಘದ ರಾಜ್ಯಾಧ್ಯಕ್ಷ ಚುನ್ನಪ್ಪ ಪೂಜಾರಿ ಭೇಟಿ!
ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ದರದ ಕುರಿತು ಚರ್ಚೆ – ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಲು ಮನವಿ
ಹಾವೇರಿ: ಕಬ್ಬು ಬೆಲೆ ನಿಗದಿ ವಿಚಾರವಾಗಿ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವ ಉದ್ದೇಶದಿಂದ ನವೆಂಬರ್ 12ರಂದು ಗುರುವಾರ ಮಧ್ಯಾಹ್ನ 3 ಗಂಟೆಗೆ ರೈತ ಸಂಘದ ರಾಜ್ಯಾಧ್ಯಕ್ಷ ಚುನ್ನಪ್ಪ ಪೂಜಾರಿ ಸೇರಿದಂತೆ ರೈತ ಮುಖಂಡರ ತಂಡ ಹಾವೇರಿಗೆ ಆಗಮಿಸಲಿದೆ.
ರೈತ ಸಂಘದ ರಾಜ್ಯಾಧ್ಯಕ್ಷ ಚುನ್ನಪ್ಪ ಪೂಜಾರಿ, ಗೌರವಾಧ್ಯಕ್ಷ ಶಶಿಕಾಂತ್ ಗುರೂಜಿ, ಕಿಸಾನ್ ನಂದಿ, ಪ್ರೇಮ್ ಚೌಗುಲ ಹಾಗೂ ಪ್ರಕಾಶ್ ನಾಯಕ್ ಅವರು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಕಬ್ಬಿನ ದರದ ಕುರಿತು ಮಾತುಕತೆ ನಡೆಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ಎಲ್ಲಾ ಕಬ್ಬು ಬೆಳೆಗಾರ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆಯೊಳಗಾಗಿ ಹಾವೇರಿಯ ಹುಕ್ಕೇರಿ ಮಠದ ಬಳಿ ಆಗಮಿಸಿ ಸಭೆಯಲ್ಲಿ ಭಾಗವಹಿಸುವಂತೆ ರೈತ ಸಂಘದ ಮುಖಂಡರು ಮನವಿ ಮಾಡಿದ್ದಾರೆ.
ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರೈತರು ಒಗ್ಗಟ್ಟಿನಿಂದ ಭಾಗವಹಿಸಬೇಕು ಎಂದು ಹಾವೇರಿ ಜಿಲ್ಲಾ ಕಬ್ಬು ಬೆಳೆಗಾರರ ರೈತ ಸಂಘ ಹಾಗೂ ಹಸಿರು ಸೇನೆಯ ಅಧ್ಯಕ್ಷ ಅಶೋಕರಡ್ಡಿ ಹನುಮರಡ್ಡಿ, ಹಾವೇರಿ ಜಿಲ್ಲಾ ರೈತ ಸಂಘ ಹಾಗೂ ಹಸಿರು ಸೇನೆಯ ಅಧ್ಯಕ್ಷ ಹನುಮಂತಣ್ಣ ಹುಚ್ಚಣ್ಣನವರ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು, ತಾಲೂಕು ಅಧ್ಯಕ್ಷರು ಹಾಗೂ ಮುಖಂಡರು ವಿನಂತಿಸಿದ್ದಾರೆ.







