6

ರಾಷ್ಟ್ರೀಯ ದತ್ತು ಮಾಸಾಚರಣೆ-ಪ್ರಚಾರಾಂದೋಲನಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ

ಯಾವುದೇ ಮಗುವನ್ನು ದತ್ತು ಪಡೆಯುವಾಗ ಕಾನೂನು ಬದ್ಧವಾಗಿ ದತ್ತು ಪಡೆಯಬೇಕು ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಹೇಳಿದರು.

ಜಿಲ್ಲಾಡಳಿತ ಭವನದ ಆವರಣದಲ್ಲಿ ಗುರುವಾರ ರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಕಾನೂನು ಬದ್ಧ ದತ್ತು ಕಾರ್ಯಕ್ರಮದ ಪ್ರಚಾರಾಂದೋಲನ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಅಧಿಕಾರಿಗಳು ಸೆಲ್ಸಿ ಸ್ಟ್ಯಾಂಡ್‌ನಲ್ಲಿ ಭಾವಚಿತ್ರ ತೆಗೆದುಕೊಳ್ಳುವ ಮೂಲಕ ಕಾನೂನು ಬದ್ದ ದತ್ತು ಪ್ರಕ್ರಿಯೆ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ದತ್ತು ಪ್ರಕ್ರಿಯೆ ಕುರಿತು ಪ್ರತಿಜ್ಞಾವಿಧಿ ಬೋಧಿಸಲಾಯಿತು.

ಹಿರಿಯ ಸಿವಿಲ್ ನ್ಯಾಯವಾದಿಗಳು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶ್ರೀಶೈಲಜಾ 5.2. ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದದ್ಗೀತಕುಮಾರ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಯಶೋಧಾ ವಂಟಗೋಡಿ, ಡಿವೈಎಸ್‌ಪಿ ಗಿರಿಮಲ್ಲಪ್ಪ ತಳಕಟ್ಟಿ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗರಾಜ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ರೀಮತಿ ರೇವತಿ ಹೊಸಮಠ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಪಾಟೀಲ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಶ್ರೀಮತಿ ಗೀತಾ ಪಾಟೀಲ, ಜಿಲ್ಲಾ ನಿರೂಪಣಾಧಿಕಾರಿ ಶ್ರೀಮತಿ ಶೈಲಾ ಕುರುಹಟ್ಟಿ ಇತರರು ಉಪಸ್ಥಿತರಿದ್ದರು.

Related Posts

ಹಾವೇರಿ ಮಹಿಳಾ ಕಾಂಗ್ರೆಸ್‌ನಿಂದ ಇಂದಿರಾ ಗಾಂಧಿ ಜನ್ಮದಿನಾಚರಣೆ!

Share this… Facebook Pinterest Twitter Linkedin Whatsappಹಾವೇರಿಯಲ್ಲಿ ಇಂದಿರಾ ಗಾಂಧಿ ಜನ್ಮದಿನಾಚರಣೆ: ಮಾಜಿ ಪ್ರಧಾನಿಯ ಕೊಡುಗೆ ಸ್ಮರಿಸಿದ ಮಹಿಳಾ ಕಾಂಗ್ರೆಸ್ ಮುಖಂಡರು ಹಾವೇರಿ: ಭಾರತದ ಮಾಜಿ ಪ್ರಧಾನಮಂತ್ರಿ ಹಾಗೂ ಉಕ್ಕಿನ ಮಹಿಳೆ ಎಂದೇ ಖ್ಯಾತರಾಗಿದ್ದ ದಿವಂಗತ ಇಂದಿರಾ ಗಾಂಧಿಯವರ ಜನ್ಮದಿನದ…

ರಾಜ್ಯ ಮಟ್ಟದ 19 ವರ್ಷದೊಳಗಿನ ಬಾಲಕಿಯರ ಕಬಡ್ಡಿ ಕ್ರೀಡಾಕೂಟ

Share this… Facebook Pinterest Twitter Linkedin Whatsappಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಹಾಗೂ ಬ್ಯಾಡಗಿ ಎಸ್.ಜೆ.ಜೆ.ಎಂ. ಸರ್ಕಾರಿ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ನ.26 ರಿಂದ 28ರವರೆಗೆ ಮೂರು ದಿನಗಳ ಕಾಲ ಬ್ಯಾಡಗಿ ಪಟ್ಟಣದ ಎಸ್.ಜೆ.ಜೆ.ಎಂ.ತಾಲೂಕು ಕ್ರೀಡಾಂಗಣದಲ್ಲಿ ಜರುಗಲಿದ್ದು, ನ.26…

You cannot copy content of this page