ಹಾವೇರಿ ಪ್ರಾದೇಶಿಕ ಸಾರಿಗೆ ಕಚೇರಿ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಗುರುವಾರ ಪ್ರಾದೇಶಿಕ ಕಚೇರಿಯಲ್ಲಿ ಜರುಗಿತು.
ಉದ್ಘಾಟನೆ ನೆರವೇರಿಸಿದ ಪ್ರಾದೇಶಿಕ ಸಾರಿಗೆ ಅಧಿಕಾರಿ ಕು.ವಿನಯ ಕಾಟೋಕರ ಅವರು ಮಾತನಾಡಿ, ವಾಹನ ಚಾಲನೆ ಸಮಯದಲ್ಲಿ ಕಣ್ಣುಗಳು ಮಹತ್ವರ ಪಾತ್ರ ವಹಿಸುತ್ತವೆ. ಹಾಗಾಗಿ ಎಲ್ಲರೂ 40 ವರ್ಷಗಳ ನಂತರ ತಮ್ಮ ಕಣ್ಣುಗಳನ್ನು ತಪಾಸಣೆ ಮಾಡಿಸಿಕೊಂಡು ದೃಷ್ಟಿದೋಷ ಇದ್ದಲ್ಲಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. ವಾಹನ ಚಾಲಕರು ತಮ್ಮ ಕಣ್ಣುಗಳ ತಪಾಸಣೆ ಮಾಡಿಸಿಕೊಂಡು ಅವಶ್ಯವಿದ್ದಲ್ಲ ಕನ್ನಡಕ ಧರಿಸಿ ವಾಹನ ಚಾಲನೆ ಮಾಡುವುದರಿಂದ ಅಪಘಾತಗಳನ್ನು ತಡೆಯಬಹುದು. ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಮೋಟಾರು ವಾಹನ ನಿರೀಕ್ಷಕರು, ಕಚೇರಿ ಸಿಬ್ಬಂದಿಗಳು, ಆರೋಗ್ಯ ಇಲಾಖೆಯವರು ಸಾರ್ವಜನಿಕರು ಭಾಗವಹಿಸಿದ್ದರು.







