6

ಭತ್ತದ ಹುಲ್ಲಿನ ಜೊತೆ ಟ್ರ್ಯಾಕ್ಟರ್ ಸುಟ್ಟು ಕರಕಲು

ವಿದ್ಯುತ್ ತಂತಿ ತಗುಲಿ ಭತ್ತದ ಹುಲ್ಲು ಸಮೇತ ಟ್ರ್ಯಾಕ್ಟರ್ ಸುಟ್ಟು ಭಸ್ಮ: ರೈತನಿಗೆ ₹6 ಲಕ್ಷ ನಷ್ಟ!

ಹಾವೇರಿ: ರಸ್ತೆಯಲ್ಲಿ ಹಾದುಹೋಗುತ್ತಿದ್ದ ವಿದ್ಯುತ್ ತಂತಿ ತಗುಲಿ ಭತ್ತದ ಹುಲ್ಲು ಸಮೇತ ಟ್ರ್ಯಾಕ್ಟರ್ ಬೆಂಕಿಗಾಹುತಿಯಾದ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಸೂಡಂಬಿ ಗ್ರಾಮದಲ್ಲಿ ನಡೆದಿದೆ.

ಗುಡ್ಡದ ಹೊಸಳ್ಳಿ ಗ್ರಾಮದ ರೈತ ಲೋಕಪ್ಪ ಹಿಂಡೇರ ಅವರಿಗೆ ಸೇರಿದ ಟ್ರ್ಯಾಕ್ಟರ್ ಇದಾಗಿದೆ ಎನ್ನಲಾಗಿದೆ. ಜಾನುವಾರುಗಳಿಗೆ ಮೇವು ತರಲು ರೈತರು ಸೂಡಂಬಿ ಗ್ರಾಮಕ್ಕೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ರಸ್ತೆಯಲ್ಲಿದ್ದ ವಿದ್ಯುತ್ ತಂತಿ ಟ್ರ್ಯಾಕ್ಟರ್‌ನಲ್ಲಿದ್ದ ಭತ್ತದ ಹುಲ್ಲಿಗೆ ತಗುಲಿದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿ ಭತ್ತದ ಹುಲ್ಲು ಹಾಗೂ ಟ್ರ್ಯಾಕ್ಟರ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಈ ಘಟನೆಯಿಂದ ರೈತ ಲೋಕಪ್ಪ ಹಿಂಡೇರ ಅವರಿಗೆ ಸುಮಾರು ₹6 ಲಕ್ಷ ಮೌಲ್ಯದ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ರಸ್ತೆಗಳಲ್ಲಿ ಜೋತು ಬಿದ್ದಿರುವ ವಿದ್ಯುತ್ ತಂತಿಗಳಿಂದ ಇಂತಹ ಅವಘಡಗಳು ಸಂಭವಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಸಂಬಂಧಪಟ್ಟ ವಿದ್ಯುತ್ ಇಲಾಖೆ ಅಧಿಕಾರಿಗಳು ಇಂತಹ ಅಪಾಯಕಾರಿ ತಂತಿಗಳ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

Related Posts

ರಾಜ್ಯ ಮಟ್ಟದ 19 ವರ್ಷದೊಳಗಿನ ಬಾಲಕಿಯರ ಕಬಡ್ಡಿ ಕ್ರೀಡಾಕೂಟ

Share this… Facebook Pinterest Twitter Linkedin Whatsappಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಹಾಗೂ ಬ್ಯಾಡಗಿ ಎಸ್.ಜೆ.ಜೆ.ಎಂ. ಸರ್ಕಾರಿ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ನ.26 ರಿಂದ 28ರವರೆಗೆ ಮೂರು ದಿನಗಳ ಕಾಲ ಬ್ಯಾಡಗಿ ಪಟ್ಟಣದ ಎಸ್.ಜೆ.ಜೆ.ಎಂ.ತಾಲೂಕು ಕ್ರೀಡಾಂಗಣದಲ್ಲಿ ಜರುಗಲಿದ್ದು, ನ.26…

ನ.23 ರಂದು ಒಂದು ದಿನದ ರಫ್ತು ಪ್ರೋತ್ಸಾಹಧನ

Share this… Facebook Pinterest Twitter Linkedin Whatsappಜವಳಿ ವಲಯದ ಸಂಭಾವ್ಯ ರಫ್ತು ಉದ್ದಿಮೆದಾರರಿಗೆ ಒಂದು ದಿನದ ರಫ್ತು ಪ್ರೊತ್ಸಾಹನ ಕಾರ್ಯಗಾರ ನ.23 ರಂದು ಸೋಮುವಾರ ಬೆಳಗ್ಗೆ 10 ಗಂಟೆಗೆ ಹಾವೇರಿ ನಗರದ “ಗುಡ್ಡೆಪ್ಪ ಹಳ್ಳಿಕೇರಿ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಜವಳಿ…

You cannot copy content of this page