ಬ್ಯಾಡಗಿ: ಮೋಟೆಬೆನ್ನೂರು ಬಳಿ ಖಾಸಗಿ ಬಸ್ ಪಲ್ಟಿ – ಹಲವರಿಗೆ ಗಂಭೀರ ಗಾಯ, ಮೂವರ ರಕ್ಷಣೆ
ಹಾವೇರಿ: ಬೆಂಗಳೂರಿನಿಂದ ಲಗ್ಗೆರೆ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿಯಾದ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ಸಮೀಪ ನಡೆದಿದೆ.
ಘಟನೆಯಲ್ಲಿ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರ ಕೈಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಇಬ್ಬರಿಂದ ನಾಲ್ವರು ಪ್ರಯಾಣಿಕರಿಗೆ ತೀವ್ರ ಸ್ವರೂಪದ ಗಾಯಗಳಾಗಿರುವ ಶಂಕೆ ವ್ಯಕ್ತವಾಗಿದೆ.

ಬಸ್ ಪಲ್ಟಿಯಾದ ಪರಿಣಾಮ ಮೂವರು ಪ್ರಯಾಣಿಕರು ಬಸ್ಸಿನೊಳಗೆ ಸಿಲುಕಿಕೊಂಡಿದ್ದರು. ಸ್ಥಳಕ್ಕೆ ಧಾವಿಸಿದ 108 ಆಂಬುಲೆನ್ಸ್ ಸಿಬ್ಬಂದಿ ಹರಸಾಹಸ ಪಟ್ಟು ಸಿಲುಕಿದ್ದ ಮೂವರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ.
ಗಾಯಾಳುಗಳಿಗೆ ಸ್ಥಳದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂದರ್ಭದಲ್ಲಿ ಗಾಯಾಳುಗಳ ಜೀವ ರಕ್ಷಣೆಗೆ ಅಪಘಾತದ ಸಂದರ್ಭದಲ್ಲಿ ಬಸ್ಸಿನೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸುವಲ್ಲಿ ಆಂಬುಲೆನ್ಸ್ ಸಿಬ್ಬಂದಿ ಪ್ರಮುಖ ಪಾತ್ರ ವಹಿಸಿದ್ದಾರೆ.
ವರದಿ: ಶ್ರೀ ಕರ್ನಾಟಕ – ಹಾವೇರಿ ಜಿಲ್ಲಾ ಡಿಜಿಟಲ್ ಮೀಡಿಯಾ






