ಶಿರಸಿ: ಹಾಲಿನ ದರ ಹೆಚ್ಚಳವಾಗಿರುವುದನ್ನು ಖಂಡಿಸಿ ಸೋಮವಾರ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಗರು ಪ್ರತಿಭಟಿಸಿದರು.
ಜಿಲ್ಲಾ ರೈತ ಮೋರ್ಚಾದವರು ಪ್ರತಿಭಟಿಸಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಹರ್ತೆಬೈಲ್ ಮಾತನಾಡಿ `ಕಾಂಗ್ರೆಸ್ ಸರ್ಕಾರ ಗ್ರಾಹಕರ ದರೋಡೆ ಮಾಡುತ್ತಿದೆ’ ಎಂದು ದೂರಿದರು. `ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ನೋಂದಣಿ ಮತ್ತು ಮುದ್ರಾಂಕ ಶುಲ್ಕ ಹೆಚ್ಚಳ ಸೇರಿ ವಿವಿಧ ರೀತಿಯಿಂದ ಜನರಿಗೆ ಅನ್ಯಾಯವಾಗುತ್ತಿದೆ’ ಎಂದರು. ರೈತ ಮುಖಂಡ ರಮೇಶ ನಾಯ್ಕ ಮಾತನಾಡಿ `ಹಾಲಿನ ಪ್ರೋತ್ಸಾಹ ಧನ ನೀಡಲೂ ರಾಜ್ಯ ಸರ್ಕಾರ ವಿಫಲವಾಗಿದೆ’ ಎಂದರು.
Discussion about this post