6
  • Latest

ಕ್ರಿಯಾ ಯೋಜನೆಗಳಿಗೆ ಅನುಮೋದನೆ: ಅಭಿವೃದ್ಧಿ ಕಾಮಗಾರಿ ನಡೆಸಲು ಜಿಲ್ಲಾಧಿಕಾರಿ ಸೂಚನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕ್ರಿಯಾ ಯೋಜನೆಗಳಿಗೆ ಅನುಮೋದನೆ: ಅಭಿವೃದ್ಧಿ ಕಾಮಗಾರಿ ನಡೆಸಲು ಜಿಲ್ಲಾಧಿಕಾರಿ ಸೂಚನೆ

AchyutKumar by AchyutKumar
in ಸ್ಥಳೀಯ

ಕಾರವಾರ: ನಗರಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯವಿರುವ 2024-25ನೇ ಸಾಲಿನ ಕ್ರಿಯಾ ಯೋಜನೆಯಲ್ಲಿನ ಎಲ್ಲಾ ಕಾಮಗಾರಿಗಳಿಗೆ ಅನುಮೋದನೆ ನೀಡಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು, ಈ ಎಲ್ಲಾ ಕಾಮಗಾರಿಗಳನ್ನು ಶೀಘ್ರದಲ್ಲಿ ಆರಂಭಿಸುವoತೆ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿದರು.
13ನೇ ಹಣಕಾಸು ಯೋಜನೆಯಡಿ ಜಿಲ್ಲೆಯ ಎಲ್ಲಾ 13 ನಗರಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 16.84 ಕೋಟಿ ರೂ ಮೊತ್ತದ ಕಾಮಗಾರಿಗಳ ಕ್ರಿಯಾ ಯೋಜನೆ, ಎಸ್.ಎಫ್.ಸಿ ಯೋಜನೆಯ 7.81 ಕೋಟಿ ರೂ ಮೊತ್ತದ ಕಾಮಗಾರಿಗಳ ಕ್ರಿಯಾ ಯೋಜನೆ ಮತ್ತು ಎಂ.ಆರ್.ಎಫ್ ಘಟಕಗಳ ಸ್ಥಾಪನೆಗೆ ಮತ್ತು 7 ಇಂದಿರಾ ಕ್ಯಾಂಟೀನ್’ಗಳಲ್ಲಿ ಅಗತ್ಯವಿರುವ ದುರಸ್ತಿ ಕಾಮಗಾರಿಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಿದ ಜಿಲ್ಲಾಧಿಕಾರಿಗಳು, ಈ ಎಲ್ಲಾ ಕಾಮಗಾರಿಗಳಿಗೆ ಕೂಡಲೇ ಟೆಂಡರ್ ಕರೆದು, ನಿಗಧಿತ ಅವಧಿಯೊಳಗೆ ವರ್ಕ್ ಆರ್ಡ್ರ್ ನೀಡಿ, ಮಳೆಗಾಲದ ಮುಗಿದ ಕೂಡಲೇ ಈ ಕಾಮಗಾರಿಗಳನ್ನು ಆರಂಭಿಸಲು, ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದರು. `ಕ್ರಿಯಾ ಯೋಜನೆಯಲ್ಲಿನ ಕಾಮಗಾರಿಗಳು ಮಾತ್ರವಲ್ಲದೇ ಸಾರ್ವಜನಿಕರಿಂದ ಬೇಡಿಕೆ ಬರುವ ಅಗತ್ಯ ತುರ್ತು ಕಾಮಗಾರಿಗಳನ್ನು ಆದ್ಯತೆಯಲ್ಲಿ ಕೈಗೊಳ್ಳಿ. ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯುವಂತೆ ನಿರಂತರವಾಗಿ ಪರಿಶೀಲಿಸಿ, ಚರಂಡಿಯಲ್ಲಿ ಕಸ ಸಂಗ್ರಹವಾಗಿ ಮಳೆಯಿಂದ ಯಾವುದೇ ಮನೆಗಳಿಗೆ ನೀರು ನುಗ್ಗದಂತೆ ಎಚ್ಚರಿಕೆ ವಹಿಸಿ, ಎಲ್ಲೆಡೆ ಸ್ವಚ್ಛತೆಗೆ ಪ್ರಥಮಾದ್ಯತೆ ನೀಡಬೇಕು’ ಎಂದರು. ಎಲ್ಲಾ ನಗರಸ್ಥಳೀಯ ಸಂಸ್ಥೆಗಳು ತಮ್ಮ ಅನುದಾನದಲ್ಲಿ, ಪ.ಜಾತಿ, ಪ.ಪಂಗಡ ಮತ್ತು ವಿಕಲಚೇತನರಿಗೆ ಮೀಸಲಿಟ್ಟಿರುವ ಸಂಪೂರ್ಣ ಅನುದಾನವನ್ನು ಸದ್ಭಳಕೆ ಮಾಡಿಕೊಂಡು ಅವರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುವಂತೆ ತಿಳಿಸಿದರು.
ಜಿಲ್ಲೆಯ ಕಾರವಾರ, ಅಂಕೋಲಾ ಮತ್ತು ಭಟ್ಕಳದಲ್ಲಿನ ಇಂದಿರಾ ಕ್ಯಾಂಟೀನ್ ಗಳಲ್ಲಿ ಸರ್ಕಾರದ ಪರಿಷ್ಕೃತ ಮೆನು ಪ್ರಕಾರ ಸಾರ್ವಜನಿಕರಿಗೆ ಬೆಳಗಿನ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿಯ ಭೋಜನ ವಿತರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆೆ ನಿರ್ದೇಶನ ನೀಡಿದರು. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತೆರಿಗೆ ವಸೂಲಾತಿಗೆ ಆದ್ಯತೆ ನೀಡುವಂತೆ ಹಾಗೂ ನಿಗಧಿತ ಅವಧಿಯಲ್ಲಿ ಶೇ.100 ರಷ್ಟು ತೆರಿಗೆ ವಸೂಲಾತಿಯನ್ನು ಮಾಡುವಂತೆ ಕಟುನಿಟ್ಟಿನ ಸೂಚನೆ ನೀಡಿದ ಅವರು, ತೆರಿಗೆ ಸಂಗ್ರಹದಲ್ಲಿ ಗುರಿ ಸಾಧಿಸದಿದ್ದಲ್ಲಿ ಸಂಬoಧಪಟ್ಟ ಅಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದರು. ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ಸ್ಟೆಲ್ಲಾ ವರ್ಗಿಸ್ ಹಾಗೂ ಜಿಲ್ಲೆಯ ಎಲ್ಲಾ ನಗರಸ್ಥಳೀಯ ಸಂಸ್ಥೆಗಳು ಆಯುಕ್ತರು, ಮುಖ್ಯಾಧಿಕಾರಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ADVERTISEMENT
Advertisement. Scroll to continue reading.
Advertisement. Scroll to continue reading.
Previous Post

ಕಾರವಾರದಲ್ಲಿ ನಾಳೆ ಕರೆಂಟ್ ಇರಲ್ಲ

Next Post

ಕುಟುಂಬದ ಜೊತೆ ಕೂಲಿಗೆ ಹೋದವ ಕಾಣೆಯಾದ!

Next Post

ಕುಟುಂಬದ ಜೊತೆ ಕೂಲಿಗೆ ಹೋದವ ಕಾಣೆಯಾದ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ