ಶಿರಸಿ: ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ `ಜನಸ್ಪಂದನಾ ಸಭೆ’ಯಲ್ಲಿ ಅಂಗವಿಕಲರೊಬ್ಬರು ಸಮಸ್ಯೆ ಹೇಳಿಕೊಳ್ಳಲು ವೇದಿಕೆ ಹತ್ತಿರ ಬರುತ್ತಿರುವುದನ್ನು ಗಮನಿಸಿದ ಶಾಸಕ ಭೀಮಣ್ಣ ನಾಯ್ಕ ಅವರ ಬಳಿಯೇ ತೆರಳಿ ಅಹವಾಲು ಸ್ವೀಕರಿಸಿದರು. ಅಂಗವಿಕಲನ ಸಮಸ್ಯೆಗೆ ಶಾಸಕರ ಅನುದಾನದ ಅಡಿ ಪರಿಹಾರ ಕಲ್ಪಿಸುವ ಭರವಸೆ ನೀಡಿದರು.
`ಸಮಾಜದಲ್ಲಿರುವ ಜನರಿಗೆ ಯಾವುದೇ ವಿಷಯದಲ್ಲಿಯೂ ತೊಂದರೆ ಆಗಬಾರದು. ತೊಂದರೆ ಕೊಡುವವರು ಪ್ರಭಾವಿಯಾಗಿದ್ದರೂ ಅವರ ಮೇಲೆ ಕ್ರಮ ಜರುಗಿಸಬೇಕು’ ಎಂದು ಭೀಮಣ್ಣ ನಾಯ್ಕ ಈ ವೇಳೆ ಅಧಿಕಾರಿಗಳಿಗೆ ಸೂಚಿಸಿದರು. `ಜನರ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಗೆ ಕಾಳಜಿ ಇರಬೇಕು. ನಗರದ ಎಲ್ಲಡೆ ಸಿಸಿ ಕ್ಯಾಮರಾ ಅಳವಡಿಸಬೇಕು. ಎಲ್ಲಾ ಅಧಿಕಾರಿಗಳು ನ್ಯಾಯದ ಪರವಾಗಿ ಕೆಲಸ ಮಾಡಬೇಕು’ ಎಂದು ಸೂಚಿಸಿದರು.
Discussion about this post