ಬೆಂಗಳೂರು: `ವಾಲ್ಮೀಕಿ ಹಗರಣವನ್ನು ಸಿಬಿಐ ತನಿಖೆಗೆ ನೀಡಬೇಕು. ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಿನಾಮೆ ನೀಡಬೇಕು’ ಎಂದು ಬಿಜೆಪಿಗರು ಬುಧವಾರ ಬೆಂಗಳೂರಿನಲ್ಲಿ ಪ್ರತಿಭಟಿಸಿದ್ದು, ಉತ್ತರ ಕನ್ನಡ ಜಿಲ್ಲೆಯ ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಪ್ರತಿಭಟನೆಯಲ್ಲಿ ಆಕ್ರೋಶ ಹೊರಹಾಕಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಈ ಹೋರಾಟ ನಡೆದಿದ್ದು, ಮುಖ್ಯಮಂತ್ರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದವರನ್ನು ಪೊಲೀಸರು ಬಂಧಿಸಿದರು. ಪ್ರತಿಭಟನೆ ವೇಳೆ ನಾಯಕರು ಮಾತನಾಡುತ್ತಿದ್ದ ವೇಳೆಯಲ್ಲಿಯೇ ಕೆಲವರನ್ನು ಪೊಲೀಸರು ಎಳೆದೊಯ್ದರು.

`ವಾಲ್ಮೀಕಿ ಹಗರಣದಲ್ಲಿ ಈಗಾಗಲೇ ಸಚಿವ ನಾಗೇಂದ್ರ ರಾಜೀನಾಮೆ ಕೊಟ್ಟಿದ್ದು, ಮುಖ್ಯಮಂತ್ರಿ ಸಹ ರಾಜೀನಾಮೆ ಕೊಡಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಬಂಧನಕ್ಕೆ ಒಳಗಾದ ಎಲ್ಲಾ ನಾಯಕರನ್ನು ಪೊಲೀಸರು ನಂತರ ಬಿಡುಗಡೆ ಮಾಡಿದರು.
Discussion about this post