ಹೊನ್ನಾವರ: `2015ರ ನಂತರ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ನಿವೃತ್ತಿ, ಮರಣ ಮತ್ತು ರಾಜೀನಾಮೆಯಿಂದ ತೆರವಾದ ಹುದ್ದೆಗಳು ಕೂಡಲೇ ಭರ್ತಿಯಾಗಬೇಕು’ ಎಂದು ವಿಧಾನ ಪರಿಷತ್ತಿನ ಶಾಸಕ ಎಸ್ ವಿ ಸಂಕನೂರ್ ಒತ್ತಾಯಿಸಿದ್ದಾರೆ.
`ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಅನುದಾನಿತ ಶಿಕ್ಷಕರ ಕೊರತೆಯಿಂದಾಗಿ ಶಿಕ್ಷಣ ಸಂಸ್ಥೆಗಳು ಸಂಕಷ್ಟದಲ್ಲಿದೆ. ಈ ಹಿಂದೆ ಅನುದಾನಕ್ಕೆ ಒಳಪಟ್ಟ ಪದವಿ ಕಾಲೇಜಿನಿಂದ ಬೇರ್ಪಟ್ಟ ಪದವಿ ಪೂರ್ವ ಕಾಲೇಜುಗಳಿಗೆ ಅನುದಾನಿತ ಹುದ್ದೆಯನ್ನು ಹೊಸದಾಗಿ ಸೃಷ್ಟಿದೇ, ಕಾಲೇಜುಗಳು ಸಂಕಷ್ಟಕ್ಕೆ ಒಳಗಾಗಿದ್ದು ಶೀಘ್ರವಾಗಿ ಅಗತ್ಯ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕು. ಇದನ್ನು ಅನುದಾನಕ್ಕೆ ಒಳಪಡಿಸುವುದಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.
Discussion about this post