ಕುಮಟಾ: ಅವ್ಯವಸ್ಥೆಯ ಆಗರವಾಗಿದ್ದ ಟೌನ್‌ಹಾಲ್’ನಲ್ಲಿ ಜುಲೈ 11ರಂದು ಆಯೋಜಿಸಿದ್ದ ಜನಸ್ಪಂದನಾ ಸಭೆ ರದ್ದಾಗಿದೆ.
ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಅವರ ಅಧ್ಯಕ್ಷತೆಯಲ್ಲಿ ಜು 11 ರಂದು ಕುಮಟಾ ತಾಲೂಕಿನ ಪುರಭವನದಲ್ಲ್ಲಿ ಸಭೆ ಆಯೋಜಿಸಲಾಗಿತ್ತು. ಸಭೆ ಆಯೋಜಿಸುವ ಆವರಣ ಸರಿಯಾಗಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಇದೀಗ ಅಲ್ಲಿ ನಡೆಯಬೇಕಿದ್ದ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಅನಿವಾರ್ಯ ಕಾರಣದಿಂದ ಮುಂದೂಡಿರುವ ಬಗ್ಗೆ ಜಿಲ್ಲಾಡಳಿತ ತಿಳಿಸಿದೆ. ಮುಂದಿನ ದಿನಾಂಕ ಹಾಗೂ ಸ್ಥಳದ ಬಗ್ಗೆ ಮಾಹಿತಿ ಬಂದಿಲ್ಲ.




Discussion about this post