ಕುಮಟಾ: ರಾಷ್ಟ್ರೀಯ ಹೆದ್ದಾರಿ 66ರ ಹೊನ್ಮಂವ್ ತಿರುವಿನಲ್ಲಿ ಬುಧವಾರ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ನದಿಗೆ ಬಿದ್ದಿದೆ.
ಕುಮಟಾ ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಟ್ಯಾಂಕರ್ ಇದಾಗಿತ್ತು. ನದಿಯ ಸೇತುವೆಗೆ ಗುದ್ದಿದ ಟ್ಯಾಂಕರ್ ನಂತರ ಕೆಳಗೆ ಬಿದ್ದಿದೆ. ಪರಿಣಾಮ ಚಾಲಕನಿಗೆ ಗಾಯವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.
Discussion about this post