ಕುಮಟಾ: ಮುಡಾ ಹಾಗೂ ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಗರಣಕ್ಕೆ ಸಂಬoಧಿಸಿ ಪ್ರತಿಭಟಿಸಲು ತೆರಳುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ರಾಘವೇಂದ್ರ ಬಂಧನ ವಿರೋಧಿಸಿ ಬಿಜೆಪಿಗರು ಕುಮಟಾದಲ್ಲಿ ಪ್ರತಿಭಟಿಸಿದರು.
`ಬಿ ವೈ ವಿಜಯೇಂದ್ರ ಅವರು ಬೆಂಗಳೂರಿನಿoದ ಮೈಸೂರಿಗೆ ತೆರಳುತ್ತಿದ್ದಾಗ ದಾರಿ ಮದ್ಯೆ ಪೊಲೀಸರು ಬಂಧಿಸಿದ್ದಾರೆ. ಇದು ಪ್ರಜಾಪ್ರಭುತ್ವದ ಕಗ್ಗೋಲೆ’ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್ ಎಸ್ ಹೆಗಡೆ ಆಕ್ರೋಶ ವ್ಯಕ್ತಪಡಿಸಿದರು. ಗಿಬ್ ಸರ್ಕಲ್’ನಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕ ದಿನಕರ್ ಶೆಟ್ಟಿ ಭಾಗವಹಿಸಿ, ರಾಜ್ಯ ಸರ್ಕಾರದ ನಿಲುವು ಖಂಡಿಸಿದರು.
Discussion about this post