6 Skip to content

ಮೋದಿ ಪ್ರಮಾಣ: ದೇವೇಗೌಡರ ಗೌರು!

ನವದೆಹಲಿ: ಮೋದಿ ಮತ್ತು ಅವರ ಸಂಪುಟ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭದಿAದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ದೂರ ಉಳಿದಿದ್ದಾರೆ.
ಈ ಕಾರ್ಯಕ್ರಮದಲ್ಲಿ ಯಾವುದೇ ವಿರೋಧ ಪಕ್ಷದ ನಾಯಕರು ಭಾಗವಹಿಸುತ್ತಿಲ್ಲ. ಎಡಪಕ್ಷಗಳ ನಾಯಕರಾದ ಸೀತಾರಾಂ ಯೆಚೂರಿ ಮತ್ತು ಡಿ ರಾಜಾ ಅವರು ಪ್ರಮಾಣ ವಚನ ಸಮಾರಂಭಕ್ಕೆ ಹೋಗುತ್ತಿಲ್ಲ. ತೃಣಮೂಲ ಕಾಂಗ್ರೆಸ್ ನಾಯಕಿ ಸಾಗರಿಕಾ ಘೋಷ್ ಅವರು ತಮ್ಮ ಆಮಂತ್ರಣ ಪತ್ರವನ್ನು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ. ಇನ್ನೊಬ್ಬ ಟಿಎಂಸಿ ನಾಯಕ, ಪ್ರಮಾಣವಚನಕ್ಕೆ ನಮಗೆ ಆಹ್ವಾನಗಳು ಬಂದಿಲ್ಲ. ನಮ್ಮ ನಾಯಕಿ ಮಮತಾ ಬ್ಯಾನರ್ಜಿ ಈಗಾಗಲೇ ಹೇಳಿರುವಂತೆ ನಾವು ಪ್ರಮಾಣ ವಚನಕ್ಕೆ ಹಾಜರಾಗುತ್ತಿಲ್ಲ ಎಂದು ಹೇಳಿದರು. ಇನ್ನು ಜೆಡಿಎಸ್ ವರಿಷ್ಠ ದೇವೇಗೌಡರು ಅನಾರೋಗ್ಯ ಹಿನ್ನೆಲೆಯಲ್ಲಿ ಇಂದು ಮೋದಿ 3.0 ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುತ್ತಿಲ್ಲ.

Leave a comment

Leave a Reply

You cannot copy content of this page