6

`ಉತ್ತರ ಕನ್ನಡಿಗರಿಗೆ ಬೇಕು ಉದ್ಯೋಗ’

ಉತ್ತರ ಕನ್ನಡ ಜಿಲ್ಲೆಯ ಯುವಜನತೆಗೆ ಕಾರವಾರದ ನೌಕಾ ಪ್ರದೇಶದಲ್ಲಿರುವ ಕೈಗಾರಿಕೆಗಳಲ್ಲಿ ಮತ್ತು ನೌಕಾ ನಲೆಯಲ್ಲಿ ಉದ್ಯೋಗವಕಾಶಗಳನ್ನು ಸೃಷ್ಠಿಸುವಂತೆ ಕರ್ನಾಟಕ ಕೌಶಲ್ಯ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ನಿವೃತ್ತ ಐ.ಎ.ಎಸ್ ಅಧಿಕಾರಿ ಡಾ.ಇ.ವಿ.ರಮಣರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆ ನಡೆಸಿದ ಅವರು `ಕಾರವಾರದ ನೌಕಾ ಪ್ರದೇಶದಲ್ಲಿರುವ ಕೈಗಾರಿಕೆಗಳಲ್ಲಿ ಉದ್ಯೋಗಗಳನ್ನು ಒದಗಿಸಲು ಯುವಕರಿಗೆ ಅಗತ್ಯ ತರಬೇತಿ ನೀಡಬೇಕು. ಆ ಮೂಲಕ ಸ್ಥಳೀಯ ಯುವ ಜನತೆ ಒದಗಿಸುವ ಮೂಲಕ ಸ್ಥಳೀಯರಿಗೆ ಆರ್ಥಿಕ ಭದ್ರತೆ ಒದಗಿಸಬೇಕು’ ಎoದು ಹೇಳಿದರು. `ಈ ಪ್ರದೇಶಗಳಲ್ಲಿ ಕೆಲಸ ನಿರ್ವಹಿಸಲು ಸ್ಥಳೀಯ ಯುವ ಜನತೆ ದೊರೆಯದ ಕಾರಣ ಹೊರರಾಜ್ಯದಿಂದ ಕಾರ್ಮಿಕರು ಬರುತ್ತಿದ್ದಾರೆ. ಈ ಕಾರ್ಮಿಕರಿಗೆ ಇಲ್ಲಿ ತಂಗಲು ವಸತಿ ವ್ಯವಸ್ಥೆ ಮತ್ತು ಊಟೋಪಚಾರದ ವ್ಯವಸ್ಥೆಯನ್ನೂ ಸಹ ಸಂಬoಧಪಟ್ಟ ಕಾರ್ಮಿಕ ಏಜೆನ್ಸಿಗಳು ನೋಡಿಕೊಳ್ಳುತ್ತಿವೆ. ಇದರ ಬದಲು ಸ್ಥಳೀಯರಿಗೆ ಆದ್ಯತೆ ಕೊಡಬೇಕು’ ಎಂದರು.
ಕೌಶಲ್ಯ ತರಬೇತಿ ಪಡೆದಿರುವ ಜಿಲ್ಲೆಯ ಸ್ಥಳೀಯ ಯುವಜನತೆಗೆ ನೌಕಾ ನೆಲೆಯಲ್ಲಿ ಅಪ್ರೆಂಟಿಸ್ ತರಬೇತಿ ನೀಡುವುದಾಗಿ ನೌಕಾನೆಲೆಯ ಅಧಿಕಾರಿಗಳು ತಿಳಿಸಿದರು. ಸೂಕ್ತ ತರಬೇತಿ ಪಡೆದಿರುವ ಸ್ಥಳೀಯ ಯುವ ಜನತೆಗೆ ನೌಕಾ ಪ್ರದೇಶದಲ್ಲಿರುವ ಕೈಗಾರಿಕೆಗಳಲ್ಲಿ ಉದ್ಯೋಗವಕಾಶ ನೀಡುವುದಾಗಿ ಮಾನವ ಸಂಪನ್ಮೂಲ ಒದಗಿಸುವ ಸಂಸ್ಥೆಗಳ ಅಧಿಕಾರಿಗಳು ತಿಳಿಸಿದರು. ಜಿಲ್ಲೆಯ ಎಲ್ಲಾ ಕೈಗಾರಿಕಾ ತರಬೇತಿ ಸಂಸ್ಥೆಗಳು, ಕಾರವಾರದ ನೌಕಾ ಪ್ರದೇಶದಲ್ಲಿರುವ ಕೈಗಾರಿಕೆಗಳಲ್ಲಿ ಮತ್ತು ನೌಕಾನೆಲೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಗತ್ಯವಿರುವ ತಿಳುವಳಿಕೆ ಪತ್ರದ ಒಪ್ಪಂದ ಮಾಡಿಕೊಂಡು, ಸ್ಥಳೀಯ ಯುವಕ ಯುವತಿಯರಿಗೆ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಡಾ ಇ ವಿ ರಮಣರೆಡ್ಡಿ ಸೂಚನೆ ನೀಡಿದರು.
ಈ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ ಕಾಂದೂ, ಕಾರವಾರ ಉಪ ವಿಭಾಗಾಧಿಕಾರಿ ಕನಿಷ್ಕ ಹಾಗೂ ಸೀ ಬರ್ಡ್, ನೌಕಾನಲೆ, ಕೌಶಲ್ಯಾಭಿವೃದ್ದಿ, ಕೈಗಾರಿಕೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

  • Related Posts

    ನಾನಾ ಪಾಟೇಕರ್ ನಿಧನಕ್ಕೆ : ಬೊಮ್ಮಾಯಿ ಸಂತಾಪ

    Share this… Facebook Pinterest Twitter Linkedin Whatsapp*ನಟ ನಾನಾ ಪಾಟೇಕರ್ ನಿಧನಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ* ಬೆಂಗಳೂರು: ಖ್ಯಾತ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ದುಖವಾಯಿತು. ಹಿಂದಿ ಹಾಗೂ ಮರಾಠಿ…

    ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗ ದೂರು ನೀಡದೇ ಯಾವುದೆ ಎಫ್ ಐಆರ್ ಮಾಡಲು ಅವಕಾಶ ಇಲ್ಲ:ಬಸವರಾಜ ಬೊಮ್ಮಾಯಿ ಸಿಎಂ ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ:ಬಸವರಾಜ ಬೊಮ್ಮಾಯಿ…

    Leave a Reply

    Your email address will not be published. Required fields are marked *

    You cannot copy content of this page