ಯಲ್ಲಾಪುರ: ತಟಗಾರ ಬಳಿಯ ಶೀಗೇಪಾಲಿನ ದೀಪಾ ಶಿವರಾಮ ಭಟ್ಟ (31) ಎಂಬಾತರು ಬಾವಿಗೆ ಬಿದ್ದು ಸಾವನಪ್ಪಿದ್ದಾರೆ.
ಮಂಗಳವಾರ ಮಧ್ಯಾಹ್ನ ತೋಟಕ್ಕೆ ಹೋಗಿದ್ದ ಅವರು ಸಂಜೆಯಾದರೂ ಮನೆಗೆ ಮರಳಿಲ್ಲ. ಮನೆಯವರು ಹುಡುಕಾಟ ನಡೆಸಿದಾಗ ಬಾವಿಯಲ್ಲಿ ಶವ ಪತ್ತೆಯಾಗಿದೆ. ಬಾವಿ ಬಳಿ ಕಾಲು ತೊಳೆಯಲು ಹೋದಾಗ ಕಾಲು ಜಾರಿ ಕೆಳಗೆ ಬಿದ್ದಿರುವ ಬಗ್ಗೆ ಶಂಕಿಸಲಾಗಿದೆ. ಮೃತರ ಶವ ಶವಾಗಾರದಲ್ಲಿದ್ದು, ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.





Discussion about this post