ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, `ಸುರಕ್ಷತೆಗೆ ಆದ್ಯತೆ ನೀಡಿ’ ಎಂದು ಜಿಲ್ಲಾಡಳಿತ ಜನರಲ್ಲಿ ಮನವಿ ಮಾಡಿದೆ.
ಗುಡ್ಡ, ನದಿ, ಹಳ್ಳ, ಕೆರೆ ಹತ್ತಿರದಲ್ಲಿ ವಾಸಿಸುತ್ತಿರುವ ಕುಟುಂಬದವರು ತಕ್ಷಣ ಸ್ಥಳಾಂತರವಾಗಬೇಕು. ತಮ್ಮೊಂದಿಗೆ ಜಾನುವಾರುಗಳನ್ನು ಸಹ ಸುರಕ್ಷಿತ ಸ್ಥಳಗಳಿಗೆ ಸಾಗಿಸಬೇಕು ಎಂದು ಜಿಲ್ಲಾಡಳಿತ ಕರೆ ನೀಡಿದೆ. ಗ್ರಾಮ ಪಂಚಾಯತ ಅಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಜನರ ಬಗ್ಗೆ ಕಾಳಜಿವಹಿಸಿ ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.




Discussion about this post